Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:3 - ಪರಿಶುದ್ದ ಬೈಬಲ್‌

3 ಆದ್ದರಿಂದ ನೀವು ಬಡಜನರಿಗೆ ಕೊಡುವಾಗ ಬಹಳ ಗುಟ್ಟಾಗಿ ಕೊಡಿ. ನೀವು ಮಾಡುವಂಥದ್ದು ಯಾರಿಗೂ ತಿಳಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ನೀನು ದಾನಧರ್ಮಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನಾದರೆ ಧರ್ಮಕೊಡುವಾಗ ನೀನು ಧರ್ಮಕೊಟ್ಟದ್ದು ಅಂತರಂಗವಾಗುವ ಹಾಗೆ ನಿನ್ನ ಬಲಗೈ ಮಾಡಿದ್ದು ಎಡಗೈಗೂ ತಿಳಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ನೀನು ದಾನಧರ್ಮ ಮಾಡುವಾಗ, ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೆ ತಿಳಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ತುಮಿ ಎಕ್ ಗರ್ಜೆತ್ ಹೊತ್ತ್ಯಾ ಮಾನ್ಸಾಕ್ ಮಜತ್ ಕರ್‍ತಾನಾ, ತುಮ್ಚ್ಯಾ ಉಜ್ವ್ಯಾ ಹಾತಾನ್ ದಿಲ್ಲೆ ರೊಡ್ಡ್ಯಾ ಹಾತಿಕ್ ಸೈತ್ ಕಳುಕ್ ದಿ ನಸ್ತಾನಾ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:3
7 ತಿಳಿವುಗಳ ಹೋಲಿಕೆ  

ತನ್ನ ಬಗ್ಗೆ ಜನರಿಗೆ ತಿಳಿಯಬೇಕೆಂದು ಅಪೇಕ್ಷಿಸುವವನು ತಾನು ಮಾಡುವ ಕಾರ್ಯಗಳನ್ನು ಮರೆಮಾಡಕೂಡದು. ನಿನ್ನನ್ನು ಈ ಲೋಕಕ್ಕೆ ತೋರಿಸಿಕೊ. ನೀನು ಮಾಡುವ ಕಾರ್ಯಗಳನ್ನು ಅವರು ನೋಡಲಿ” ಎಂದು ಹೇಳಿದರು.


ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು.


ಆತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಆತನ ಶಬ್ದ ಕೇಳಿಸುವುದಿಲ್ಲ.


ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.


“ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.


ನೀವು ದಾನವನ್ನು ರಹಸ್ಯವಾಗಿ ಕೊಡಬೇಕು. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆ ನಿಮಗೆ ಪ್ರತಿಫಲ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು