ಮತ್ತಾಯ 6:7 - ಪರಿಶುದ್ದ ಬೈಬಲ್7 “ನೀವು ಪ್ರಾರ್ಥಿಸುವಾಗ ದೇವರನ್ನು ತಿಳಿದಿಲ್ಲದ ಜನರಂತೆ ಪ್ರಾರ್ಥಿಸಬೇಡಿ. ಅವರು ಅರ್ಥವಿಲ್ಲದ ಸಂಗತಿಗಳನ್ನು ಹೇಳುತ್ತಲೇ ಇರುತ್ತಾರೆ. ಆ ರೀತಿ ಪ್ರಾರ್ಥಿಸಬೇಡಿ. ತಾವು ಅನೇಕ ವಿಷಯಗಳನ್ನು ಹೇಳುವುದರಿಂದ ದೇವರು ತಮ್ಮ ಪ್ರಾರ್ಥನೆಯನ್ನು ಕೇಳುತ್ತಾನೆಂಬುದು ಅವರ ಆಲೋಚನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ಪ್ರಾರ್ಥನೆಮಾಡುವಾಗ ಅಜ್ಞಾನಿಗಳ ಹಾಗೆ ಹೇಳಿದ್ದನ್ನೇ ಸುಮ್ಮಸುಮ್ಮನೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ನೆನಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ನೀವು ಪ್ರಾರ್ಥನೆ ಮಾಡುವಾಗ ಯೆಹೂದ್ಯರಲ್ಲದವರಂತೆ ವ್ಯರ್ಥವಾಗಿ ಹೇಳಿದ್ದನ್ನೇ ಪದೇಪದೇ ಹೇಳಬೇಡಿರಿ. ತಮ್ಮ ಅನೇಕ ಮಾತುಗಳ ದೆಸೆಯಿಂದ ತಮ್ಮ ಪ್ರಾರ್ಥನೆಯನ್ನು ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತುಮಿ ಮಾಗ್ನಿ ಕರ್‍ತಾನಾ, ತ್ಯಾ ದೆವಾಕ್ ವಳ್ಕಿನಸಲ್ಲ್ಯಾ ಲೊಕಾಂಚ್ಯಾ ಸರ್ಕೆ ಅರ್ತ್ ನಸಲ್ಲಿ ಲೈ-ಲೈ ಶಬ್ದಾ ವಾಪ್ರುನಕಾಶಿ, ಲಾಂಬ್-ಲಾಂಬ್ಲ್ಯಾ ಮಾಗ್ನಿಯಾ ಕರ್ಲ್ಯಾರ್ ದೆವ್ ತೆಂಚ್ಯಾ ಮಾಗ್ನಿಯಾ ಆಯಿಕ್ತಾ ಮನುನ್ ತೆನಿ ಯವಜ್ತ್ಯಾತ್. ಅಧ್ಯಾಯವನ್ನು ನೋಡಿ |