ಮತ್ತಾಯ 7:12 - ಪರಿಶುದ್ದ ಬೈಬಲ್12 “ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಇದೇ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದ್ದರಿಂದ, ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಬಯಸುತ್ತೀರೋ, ಅದರಂತೆಯೇ ನೀವು ಅವರಿಗೆ ಮಾಡಿರಿ; ಇದೇ ನಿಯಮ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 “ದುಸ್ರ್ಯಾನಿ ತುಮ್ಕಾ ಕಶೆ ಕರುಚೆ ಮನುನ್ ತುಮಿ ಯವಜ್ತ್ಯಾಶಿ, ತಸೆಚ್ ತುಮಿಬಿ ದುಸ್ರ್ಯಾಕ್ನಿ ಕರಾ; ಮೊಯ್ಜೆನ್ ದಿಲ್ಲ್ಯಾ ಖಾಯ್ದ್ಯಾಂಚೊ ಅನಿ ಪ್ರವಾದ್ಯಾನಿ ಶಿಕ್ವಲ್ಲ್ಯಾಚೊ ಅರ್ತ್ ಹ್ಯೊಚ್”. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.