ಮತ್ತಾಯ 7:17 - ಪರಿಶುದ್ದ ಬೈಬಲ್17 ಅದೇ ರೀತಿ ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹಾಗೆಯೇ ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದರಂತೆಯೇ ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹಾಗೆಯೇ ಒಳ್ಳೇ ಮರಗಳೆಲ್ಲಾ ಒಳ್ಳೇ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅದರಂತೆಯೇ, ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಆದರೆ ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಎಕ್ ಬರೆ ಝಾಡ್ ಬರಿಚ್ ಫಳಾ ದಿತಾ, ಎಕ್ ರೊಗೆಸಿ ಝಾಡ್ ಬರಿಲಿ ಫಳಾ ದಿ ನಾ. ಅಧ್ಯಾಯವನ್ನು ನೋಡಿ |
ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”