ಮತ್ತಾಯ 7:2 - ಪರಿಶುದ್ದ ಬೈಬಲ್2 ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ದುಸ್ರ್ಯಾಕ್ನಿ ನ್ಯಾಯ್ ಕರುಕ್ ತುಮಿ ಖಲೊ ಮಾಪ್ ವಾಪರ್‍ತ್ಯಾಶಿ, ತೊಚ್ ಮಾಪ್ ದೆವ್ ತುಮ್ಚಿ ನ್ಯಾಯ್ ಕರ್‍ತಾನಾಬಿ ವಾಪರ್‍ತಾ. ಅಧ್ಯಾಯವನ್ನು ನೋಡಿ |
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.
ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:
“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.