Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:23 - ಪರಿಶುದ್ದ ಬೈಬಲ್‌

23 ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ನಾನು ಅವರಿಗೆ - ನಾನೆಂದೂ ನಿಮ್ಮ ಗುರುತು ಕಾಣೆನು; ಧರ್ಮವನ್ನು ಮೀರಿನಡೆಯುವವರೇ, ನನ್ನಿಂದ ತೊಲಗಿಹೋಗಿರಿ ಎಂದು ಎಲ್ಲರ ಮುಂದೆ ಹೇಳಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’ ಎಂದು ಹೇಳಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ಮಿಯಾ ತೆಂಕಾ,ತುಮಿ ಕೊನ್ ಮನುನ್ ಮಾಕಾ ಗೊತ್ತ್ ನಾ. ಬುರ್ಶ್ಯಾ ಲೊಕಾನು ಮಾಜೆಕ್ನಾ ಧುರ್ ಜಾವಾ! ಮನುನ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:23
11 ತಿಳಿವುಗಳ ಹೋಲಿಕೆ  

“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ದುಷ್ಟರೇ, ತೊಲಗಿಹೋಗಿರಿ. ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.


ಆಗ ಅವನು ನಿಮಗೆ, ‘ನೀವು ಯಾರೋ ನನಗೆ ಗೊತ್ತಿಲ್ಲ! ನೀವು ಎಲ್ಲಿಯವರು? ಇಲ್ಲಿಂದ ಹೊರಟುಹೋಗಿ! ನೀವೆಲ್ಲರೂ ಪಾಪಕೃತ್ಯಗಳನ್ನು ಮಾಡುವ ಜನರು!’ ಎಂದು ನಿಮಗೆ ಹೇಳುವನು.


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.


“ಆದರೆ ಮದುಮಗನು, ‘ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನೀವು ಯಾರೋ ನನಗೆ ಗೊತ್ತಿಲ್ಲ’ ಎಂದು ಉತ್ತರಕೊಟ್ಟನು.


“ನಾನು ಕುರಿಗಳಿಗಾಗಿ (ಜನರಿಗಾಗಿ) ಚಿಂತಿಸುವ ಕುರುಬನಾಗಿದ್ದೇನೆ. ನನ್ನ ತಂದೆಯು ನನ್ನನ್ನು ತಿಳಿದಿರುವಂತೆ ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ಮತ್ತು ನಾನು ನನ್ನ ತಂದೆಯನ್ನು ತಿಳಿದಿರುವಂತೆ ನನ್ನ ಕುರಿಗಳು ನನ್ನನ್ನು ತಿಳಿದಿವೆ. ಈ ಕುರಿಗಳಿಗೋಸ್ಕರ ನನ್ನ ಜೀವವನ್ನೇ ಕೊಡುತ್ತೇನೆ.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ನಿನ್ನನ್ನು ನಂಬದವರು ನಿನ್ನ ಬಳಿಗೆ ಬರಲಾರರು; ದುಷ್ಟರನ್ನು ನೀನು ದ್ವೇಷಿಸುವೆ.


ಕೆಡುಕರನ್ನು ನನ್ನ ಬಳಿಗೆ ಬರಗೊಡಿಸಬೇಡ. ಆಗ ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು