Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:16 - ಪರಿಶುದ್ದ ಬೈಬಲ್‌

16 ಅಂದು ಸಾಯಂಕಾಲ ಜನರು ದೆವ್ವದಿಂದ ಪೀಡಿತರಾಗಿದ್ದ ಅನೇಕರನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಯೇಸುವು ಮಾತಿನಿಂದಲೇ ದೆವ್ವಗಳನ್ನು ಅವರಿಂದ ಓಡಿಸಿದನು; ಕಾಯಿಲೆಯಾಗಿದ್ದ ಜನರೆಲ್ಲರನ್ನೂ ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಂಜೆಯಾಯಿತು, ದೆವ್ವ ಹಿಡಿದ ಅನೇಕರನ್ನು ಯೇಸುವಿನ ಬಳಿಗೆ ಕರೆತರಲಾಯಿತು. ಯೇಸು ತಮ್ಮ ಒಂದು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದರು. ಮಾತ್ರವಲ್ಲ, ರೋಗಪೀಡಿತರೆಲ್ಲರನ್ನೂ ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸಂಜೆಯಾದಾಗ, ದೆವ್ವಹಿಡಿದ ಅನೇಕರನ್ನು ಜನರು ಯೇಸುವಿನ ಬಳಿಗೆ ಕರೆತಂದರು. ಯೇಸು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ, ಎಲ್ಲಾ ರೋಗಪೀಡಿತರನ್ನೂ ಸ್ವಸ್ಥಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಸಾಂಜ್ ಹೊಲ್ಲ್ಯಾ ತನ್ನಾ ಲೊಕಾನಿ ಗಿರೆಲಾಗಲ್ಲ್ಯಾಕ್ನಿ ಜೆಜುಕ್ಡೆ ಘೆವ್ನ್ ಯೆಲ್ಯಾನಿ. ಜೆಜುನ್ ಅಪ್ನಾಚ್ಯಾ ಗೊಸ್ಟಿಯಾನಿ ತೆಂಚೆ ಸಗ್ಳ್ಯಾಂಚೆ ಗಿರೆ ಭಾಯ್ರ್ ಕಾಡ್ಲ್ಯಾನ್, ಅನಿ ಸಿಕ್ ಹೊತ್ತ್ಯಾಕ್ನಿ ಆರಾಮ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:16
17 ತಿಳಿವುಗಳ ಹೋಲಿಕೆ  

ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.


ಸೂರ್ಯನು ಮುಳುಗಿದ ಮೇಲೆ, ಅಸ್ವಸ್ಥರಾದ ತಮ್ಮ ಸ್ನೇಹಿತರನ್ನು ಜನರು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಅವರಿಗೆ ಅನೇಕ ತರಹದ ಕಾಯಿಲೆಗಳಿದ್ದವು. ಪ್ರತಿಯೊಬ್ಬ ರೋಗಿಯ ಮೇಲೂ ಯೇಸು ತನ್ನ ಕೈಯನ್ನಿಟ್ಟು ಗುಣಪಡಿಸಿದನು.


ಯೇಸು ಅಲ್ಲಿಗೆ ಬಂದಾಗ, ಜನರು ಗುಂಪುಗುಂಪಾಗಿ ನೆರೆದಿರುವುದನ್ನು ಕಂಡು ಅವರಿಗಾಗಿ ದುಃಖಪಟ್ಟು ಕಾಯಿಲೆಯವರನ್ನು ಗುಣಪಡಿಸಿದನು.


ಹೀಗಿರಲು, ಪೇತ್ರನು ದಾರಿಯಲ್ಲಿ ಹೋಗುತ್ತಾನೆಂಬ ಸುದ್ದಿಯನ್ನು ಕೇಳಿದ ಜನರು ಕಾಯಿಲೆಯವರನ್ನು ಬೀದಿಗಳಿಗೆ ಹೊತ್ತುಕೊಂಡು ಬಂದು ಹಾಸಿಗೆ ಮತ್ತು ಡೋಲಿಗಳ ಮೇಲೆ ಮಲಗಿಸುತ್ತಿದ್ದರು. ಪೇತ್ರನ ನೆರಳು ಬಿದ್ದರೆ ಸಾಕು, ಕಾಯಿಲೆಯವರು ಗುಣಮುಖರಾಗುತ್ತಾರೆಂದು ಜನರು ಯೋಚಿಸಿಕೊಂಡಿದ್ದರು.


ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು.


ಕೆಲವು ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು. ಅವನನ್ನು ನಾಲ್ಕು ಮಂದಿ ಹೊತ್ತುಕೊಂಡಿದ್ದರು.


ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ, “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.


ಹಂದಿಗಳನ್ನು ಮೇಯಿಸುತ್ತಿದ್ದವರು ಪಟ್ಟಣದೊಳಕ್ಕೆ ಓಡಿಹೋಗಿ ಹಂದಿಗಳಿಗೂ ದೆವ್ವಗಳಿಂದ ಪೀಡಿತರಾಗಿದ್ದವರಿಗೂ ಸಂಭವಿಸಿದ್ದನ್ನು ಜನರಿಗೆ ತಿಳಿಸಿದರು.


ಯೇಸು ಅವಳ ಕೈ ಮುಟ್ಟಿದಾಗ ಜ್ವರವು ಅವಳನ್ನು ಬಿಟ್ಟುಹೋಯಿತು. ಆಗ ಅವಳು ಮೇಲೆದ್ದು, ಆತನ ಸೇವೆಮಾಡಿದಳು.


ಅನೇಕ ಜನರೊಳಗಿಂದ ದೆವ್ವಗಳು, “ನೀನು ದೇವಕುಮಾರ” ಎಂದು ಆರ್ಭಟಿಸುತ್ತಾ ಬಿಟ್ಟುಹೋದವು. ಆದರೆ ಯೇಸು ಆ ದೆವ್ವಗಳಿಗೆ, “ಮಾತಾಡಕೂಡದೆಂದು” ಬಲವಾಗಿ ಆಜ್ಞಾಪಿಸಿದನು. ಯೇಸುವೇ “ಕ್ರಿಸ್ತ”ನೆಂದು ದೆವ್ವಗಳಿಗೆ ತಿಳಿದಿತ್ತು.


ಯೇಸು ಆಕೆಯನ್ನು ಕಂಡು, ತನ್ನ ಬಳಿಗೆ ಕರೆದು, “ಅಮ್ಮಾ, ನಿನ್ನ ಕಾಯಿಲೆ ನಿನ್ನನ್ನು ಬಿಟ್ಟುಹೋಗಿದೆ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು