Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:24 - ಪರಿಶುದ್ದ ಬೈಬಲ್‌

24 ದೋಣಿಯು ದಡವನ್ನು ಬಿಟ್ಟಮೇಲೆ ದೊಡ್ಡ ಬಿರುಗಾಳಿಯು ಸರೋವರದ ಮೇಲೆ ಪ್ರಾರಂಭವಾಯಿತು. ಅಲೆಗಳು ದೋಣಿಯನ್ನು ಮುಚ್ಚಿಕೊಂಡವು. ಆದರೆ ಯೇಸು ನಿದ್ರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದ್ದಕ್ಕಿದ್ದ ಹಾಗೆ ಸರೋವರದಲ್ಲಿ ರಭಸವಾದ ಬಿರುಗಾಳಿ ಎದ್ದಿತು. ದೋಣಿ ಅಲೆಗಳಿಂದ ಮುಳುಗಿಹೋಗುವುದರಲ್ಲಿತ್ತು. ಯೇಸುವಾದರೋ ನಿದ್ರಾವಶರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲಕಲ್ಲೋಲವಾಗಿ ದೋಣಿಯು ತೆರೆಗಳಿಂದ ಮುಚ್ಚಿಹೋಯಿತು; ಆದರೆ ಆತನು ನಿದ್ದೆ ಹತ್ತಿ ಮಲಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದ್ದಕ್ಕಿದ್ದ ಹಾಗೆ, ಸರೋವರದಲ್ಲಿ ದೊಡ್ಡ ಬಿರುಗಾಳಿ ಎದ್ದ ಕಾರಣ ದೋಣಿಯು ಅಲೆಗಳಿಂದ ಮುಚ್ಚುತ್ತಿತ್ತು. ಆದರೆ ಯೇಸು ನಿದ್ರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಎಗ್ದಮ್ ಸಮುಂದಾರಾತ್ ಮೊಟೊ ವಾರೊ ಪವ್ಸ್ ಉಟ್ಲೊ. ಢೊನ್ ಹಾಲುನ್- ಹಾಲುನ್ ಬುಡುಕ್ ಯೆಲ್ಲಿ. ಖರೆ ಜೆಜು ನಿಜಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:24
13 ತಿಳಿವುಗಳ ಹೋಲಿಕೆ  

ಅವರು ಸರೋವರದ ಮೇಲೆ ದೋಣಿಯಲ್ಲಿ ಹೋಗುತ್ತಿರುವಾಗ ಯೇಸುವಿಗೆ ನಿದ್ದೆ ಹತ್ತಿತು. ಇತ್ತ ಸರೋವರದ ಮೇಲೆ ಬಿರುಗಾಳಿ ಬೀಸತೊಡಗಿತು. ದೋಣಿಯೊಳಗೆ ನೀರು ತುಂಬತೊಡಗಿತು. ದೋಣಿಯಲ್ಲಿದ್ದವರೆಲ್ಲರೂ ಅಪಾಯಕ್ಕೀಡಾದರು.


ಆದರೆ ನಾನು ಅಲ್ಲಿ ಇಲ್ಲದಿದ್ದ ಕಾರಣ ಸಂತೋಷಿಸುತ್ತೇನೆ. ನಿಮ್ಮ ವಿಷಯದಲ್ಲಿಯೂ ನಾನು ಸಂತೋಷಪಡುತ್ತೇನೆ. ಏಕೆಂದರೆ, ಆಗ ನೀವು ನನ್ನಲ್ಲಿ ನಂಬಿಕೆ ಇಡುವಿರಿ. ಬನ್ನಿ, ಅವನ ಬಳಿಗೆ ಹೋಗೋಣ” ಎಂದು ಸ್ವಷ್ಟವಾಗಿ ಹೇಳಿದನು.


“ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.


ಪರ್ವತಗಳು ನಿನ್ನನ್ನು ನೋಡಿ ನಡುಗಿದವು. ನೆಲದ ಮೇಲಿಂದ ನೀರು ಹರಿದುಹೋಯಿತು. ಭೂಮಿಯ ಮೇಲೆ ತನಗಿದ್ದ ಶಕ್ತಿ ಹೋದದ್ದನ್ನು ನೋಡಿ ಸಮುದ್ರವು ಗಟ್ಟಿಯಾಗಿ ಶಬ್ದ ಮಾಡಿತು.


ಯೇಸು ದೋಣಿಯೊಳಗೆ ಹೋದನು. ಆತನ ಶಿಷ್ಯರೂ ಆತನೊಂದಿಗೆ ಹೋದರು.


ಯೇಸುವಿನ ಶಿಷ್ಯರು ಆತನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಪ್ರಭುವೇ, ನಮ್ಮನ್ನು ರಕ್ಷಿಸು! ನಾವು ಮುಳುಗುತ್ತಿದ್ದೇವೆ!” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು