ಮತ್ತಾಯ 8:29 - ಪರಿಶುದ್ದ ಬೈಬಲ್29 ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತೆನಿ ಎಗ್ದಮ್, “ದೆವಾಚ್ಯಾ ಲೆಕಾ ಅಮ್ಚ್ಯಾಕ್ನಾ ತುಕಾ ಕಾಯ್ ಪಾಜೆ? ಅಮ್ಚೊ ಎಳ್ ಯೆವ್ಚ್ಯಾ ಅದ್ದಿಚ್ ಅಮ್ಕಾ ಶಿಕ್ಷಾ ದಿವ್ಕ್ ಯೆಲೆ ಕಾಯ್?” ಮನುನ್ ಕಿಂಚ್ಲ್ಯಾನಿ. ಅಧ್ಯಾಯವನ್ನು ನೋಡಿ |
ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.
ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.
ಆದರೆ ನೆಕೋ ಯೋಷೀಯನಿಗೆ ಸಂದೇಶವನ್ನು ಕಳುಹಿಸಿ ಅದರಲ್ಲಿ, “ಅರಸನಾದ ಯೋಷೀಯನೇ, ನಾನು ನಿನಗೆ ವಿರುದ್ಧವಾಗಿ ಬರಲಿಲ್ಲ. ಆದ್ದರಿಂದ ನೀನು ಯುದ್ಧಕ್ಕೆ ಕೈಹಾಕಬೇಡ. ನಾನು ನನ್ನ ವೈರಿಗಳ ಮೇಲೆ ಯುದ್ಧಮಾಡಲು ಬಂದಿದ್ದೇನೆ. ಬೇಗನೆ ಯುದ್ಧಮಾಡಲು ದೇವರು ನನ್ನನ್ನು ಅವಸರಪಡಿಸುತ್ತಿದ್ದಾನೆ. ದೇವರು ನಿನ್ನೊಂದಿಗಿದ್ದಾನೆ. ಆದ್ದರಿಂದ ನನಗೆ ತೊಂದರೆ ಕೊಡಬೇಡ. ನೀನು ನನ್ನ ಮೇಲೆ ಯುದ್ಧ ಮಾಡಿದರೆ ದೇವರು ನಿನ್ನನ್ನು ನಾಶಮಾಡುವನು” ಎಂದು ಹೇಳಿದನು.