Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:5 - ಪರಿಶುದ್ದ ಬೈಬಲ್‌

5 ಯೇಸು ಕಪೆರ್ನೌಮ್ ಪಟ್ಟಣಕ್ಕೆ ಹೊರಟುಹೋದನು. ಆತನು ಪಟ್ಟಣಕ್ಕೆ ಪ್ರವೇಶಿಸಿದಾಗ ಸೈನ್ಯದ ಅಧಿಕಾರಿಯೊಬ್ಬನು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೇಸುಸ್ವಾಮಿ ಕಫೆರ್ನವುಮ್ ಊರಿಗೆ ಬಂದಾಗ ಶತಾಧಿಪತಿಯೊಬ್ಬನು ಅವರನ್ನು ಎದುರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು ಕಪೆರ್ನೌವಿುಗೆ ಬಂದಾಗ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸು ಕಪೆರ್ನೌಮಿಗೆ ಪ್ರವೇಶಿಸಿದಾಗ, ಒಬ್ಬ ಶತಾಧಿಪತಿಯು ಅವರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜೆಜು ಕಪರ್‍ನವ್ ಮನ್ತಲ್ಲ್ಯಾ ಗಾಂವಾತ್ ಗುಸಲ್ಲ್ಯಾ ತನ್ನಾಚ್ ರೊಮಾಚ್ಯಾ ಸೆಂಬರ್ ಸೈನಿಕಾಂಚೊ ಎಕ್ ಅದಿಕಾರಿ ಜೆಜುಕ್ ಭೆಟ್ಲೊ, ಅನಿ ಮಜತ್ ಮಾಗುನ್ಗೆತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:5
15 ತಿಳಿವುಗಳ ಹೋಲಿಕೆ  

ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.


ಆದರೆ ಸೇನಾಧಿಕಾರಿಯಾದ ಜೂಲಿಯಸನು ಪೌಲನನ್ನು ಉಳಿಸಲಪೇಕ್ಷಿಸಿ ಕೈದಿಗಳನ್ನು ಕೊಲ್ಲಲು ಸೈನಿಕರಿಗೆ ಅಪ್ಪಣೆ ಕೊಡಲಿಲ್ಲ. ಈಜು ಬಲ್ಲವರೆಲ್ಲರು ನೀರಿಗೆ ಧುಮುಕಿ ಈಜಿಕೊಂಡು ದಡಕ್ಕೆ ಹೋಗಬೇಕೆಂದು ಜೂಲಿಯಸನು ಹೇಳಿದನು.


ಆದರೆ ಪೌಲನು ಸೇನಾಧಿಕಾರಿಗೆ ಮತ್ತು ಇತರ ಸೈನಿಕರಿಗೆ, “ಈ ನಾವಿಕರು ಹಡಗಿನಲ್ಲಿ ಇರದಿದ್ದರೆ ನಿಮ್ಮ ಪ್ರಾಣಗಳು ಉಳಿಯಲು ಸಾಧ್ಯವಿಲ್ಲ” ಎಂದು ಹೇಳಿದನು.


ಆಗ ಪೌಲನು ಸೇನಾಧಿಕಾರಿಗಳಲ್ಲಿ ಒಬ್ಬನನ್ನು ಕರೆದು, “ಈ ಯೌವನಸ್ಥನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋಗು. ಇವನು ಒಂದು ಸಂದೇಶವನ್ನು ಅವನಿಗೆ ತಿಳಿಸಬೇಕಾಗಿದೆ” ಎಂದು ಹೇಳಿದನು.


ಆತನು ನಜರೇತಿನಲ್ಲಿ ಇಳಿದುಕೊಳ್ಳದೆ ಹೊರಟುಹೋಗಿ ಗಲಿಲಾಯ ಸರೋವರಕ್ಕೆ ಹತ್ತಿರವಿದ್ದ ಕಪೆರ್ನೌಮ್ ಎಂಬ ಊರಲ್ಲಿ ವಾಸಿಸಿದನು. ಈ ಊರು ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳ ಬಳಿಯಲ್ಲಿದೆ.


ಬಳಿಕ ಒಳ್ಳೆಯ ಗಾಳಿಯು ದಕ್ಷಿಣದ ಕಡೆಯಿಂದ ಬೀಸತೊಡಗಿತು. ಹಡಗಿನಲ್ಲಿದ್ದ ಜನರು, “ನಮಗೆ ಬೇಕಾಗಿದ್ದು ಈ ಗಾಳಿಯೇ, ಈಗ ಅದು ನಮಗೆ ದೊರಕಿತು!” ಎಂದು ಭಾವಿಸಿಕೊಂಡರು. ಆದ್ದರಿಂದ ಅವರು ಹಡಗಿನ ಲಂಗರನ್ನು ಮೇಲಕ್ಕೆ ಎಳೆದರು. ನಾವು ಕ್ರೇಟ್ ದ್ವೀಪದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು.


ಬಳಿಕ ಸೇನಾಧಿಪತಿಯು ಇಬ್ಬರು ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಸೆಜರೇಯಕ್ಕೆ ಕಳುಹಿಸಿಕೊಡಲು ಇನ್ನೂರು ಮಂದಿ ಸೈನಿಕರನ್ನು ಸಿದ್ಧಪಡಿಸು. ಅಲ್ಲದೆ ಎಪ್ಪತ್ತು ಮಂದಿಯ ಅಶ್ವದಳವನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಪಡಿಸು. ಈ ರಾತ್ರಿ ಒಂಭತ್ತು ಗಂಟೆಗೆ ಇಲ್ಲಿಂದ ಹೊರಡಲು ನೀವು ಸಿದ್ಧರಾಗಿರಬೇಕು.


ಸೈನಿಕರು ಹೊಡೆಯುವುದಕ್ಕಾಗಿ ಪೌಲನನ್ನು ಕಟ್ಟುತ್ತಿರಲು ಅಲ್ಲಿದ್ದ ರೋಮ್ ಅಧಿಕಾರಿಗೆ ಪೌಲನು, “ಅಪರಾಧಿಯೆಂದು ತೀರ್ಪಾಗಿಲ್ಲದ ರೋಮ್ ಪ್ರಜೆಯೊಬ್ಬನನ್ನು ಹೊಡೆಯಲು ನಿಮಗೆ ಹಕ್ಕಿದೆಯೋ?” ಎಂದು ಕೇಳಿದನು.


ಶಿಲುಬೆಯ ಮುಂದೆ ನಿಂತಿದ್ದ ಸೈನ್ಯದ ಅಧಿಕಾರಿಯು ಯೇಸು ಪ್ರಾಣಬಿಟ್ಟಾಗ ನಡೆದದ್ದನ್ನು ನೋಡಿ, “ಈ ಮನುಷ್ಯನು ನಿಜವಾಗಿಯೂ ದೇವರ ಮಗನು” ಎಂದನು.


ಕೆಲವು ದಿನಗಳ ತರುವಾಯ, ಯೇಸು ಕಪೆರ್ನೌಮಿಗೆ ಹಿಂದಿರುಗಿ ಬಂದನು. ಯೇಸು ಮನೆಯಲ್ಲಿದ್ದಾನೆಂಬ ಸುದ್ದಿಯು ಹಬ್ಬಿತು.


ಯೇಸು ದೋಣಿಯನ್ನು ಹತ್ತಿ ಸರೋವರವನ್ನು ದಾಟಿ ತನ್ನ ಸ್ವಂತ ಊರಿಗೆ ಹೋದನು.


“ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.


ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು