ಮತ್ತಾಯ 8:6 - ಪರಿಶುದ್ದ ಬೈಬಲ್6 “ಪ್ರಭುವೇ, ನನ್ನ ಸೇವಕನು ಕಾಯಿಲೆಯಿಂದ ಹಾಸಿಗೆಯ ಮೇಲಿದ್ದಾನೆ. ಅವನು ಬಹಳ ನೋವಿನಿಂದ ನರಳುತ್ತಿದ್ದಾನೆ” ಎಂದು ಸಹಾಯಕ್ಕಾಗಿ ಬೇಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಪ್ರಭೂ, ನನ್ನ ಸೇವಕ ಮನೆಯಲ್ಲಿ ಪಾರ್ಶ್ವವಾಯು ರೋಗದಿಂದ ಹಾಸಿಗೆ ಹಿಡಿದಿದ್ದಾನೆ. ಬಹಳವಾಗಿ ನರಳುತ್ತಿದ್ದಾನೆ,” ಎಂದು ವಿನಂತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಪ್ರಭುವೇ, ನನ್ನ ಆಳು ಪಾರ್ಶ್ವವಾಯುವಿನಿಂದ ಬಹಳ ಕಷ್ಟಪಡುತ್ತಾ ಮನೆಯಲ್ಲಿ ಬಿದ್ದಿದ್ದಾನೆ ಎಂದು ಹೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಸ್ವಾಮೀ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಘೋರವಾಗಿ ನರಳುತ್ತಾ ಮನೆಯಲ್ಲಿ ಹಾಸಿಗೆ ಹಿಡಿದಿದ್ದಾನೆ,” ಎಂದು ಹೇಳಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 “ಧನಿಯಾ, ಮಾಜೊ ಆಳ್ ವಾರ್‍ಯಾನ್ ಮಾರುನ್ ಹಾತ್ರಾನಾತ್ ಪಡ್ಲಾ, ತೊ ಲೈ ತರಾಸ್ ಕರುನ್ ಘೆವ್ಲಾ”. ಮನುಕ್‍ಲಾಲೊ. ಅಧ್ಯಾಯವನ್ನು ನೋಡಿ |
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.
ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.