Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:14 - ಪರಿಶುದ್ದ ಬೈಬಲ್‌

14 ನಂತರ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನಾವು ಮತ್ತು ಫರಿಸಾಯರು ಆಗಾಗ್ಗೆ ಉಪವಾಸ ಮಾಡುತ್ತೇವೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬಳಿಕ ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು. “ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?” ಎಂದು ಪ್ರಶ್ನೆಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಮೇಲೆ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು - ಫರಿಸಾಯರೂ ನಾವೂ ಉಪವಾಸಮಾಡುತ್ತೇವಲ್ಲ; ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಬಳಿಕ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವೂ, ಫರಿಸಾಯರೂ ಉಪವಾಸ ಮಾಡುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಜುವಾಂವ್ ಬಾವ್ತಿಸಾಚಿ ಶಿಸಾ ಜೆಜುಕ್ಡೆ ಯೆಲಿ, ಅನಿ ಜೆಜುಕ್, “ಅಮಿ ಅನಿ ಫಾರಿಜೆವಾ ತನ್ನಾ-ತನ್ನಾ ಉಪಾಸ್ ಕರ್‍ತಾವ್, ಖರೆ ತುಜಿ ಶಿಸಾ ಉಪಾಸ್ ಕರಿನ್ಯಾತ್ ಕಶ್ಯಾಕ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:14
10 ತಿಳಿವುಗಳ ಹೋಲಿಕೆ  

“ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಮತ್ತೊಬ್ಬ ಯೆಹೂದ್ಯನಿಗೂ ಶುದ್ಧಾಚಾರದ ಬಗ್ಗೆ ವಾದವಾಯಿತು.


ತಾನು ಯೋಹಾನನಿಗಿಂತಲೂ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಿರುವ ಸುದ್ದಿಯು ಫರಿಸಾಯರಿಗೆ ತಿಳಿಯಿತೆಂಬುದು ಯೇಸುವಿಗೆ ಗೊತ್ತಾಯಿತು.


ಸ್ನಾನಿಕನಾದ ಯೋಹಾನನು ಸೆರೆಯಲ್ಲಿದ್ದನು. ಕ್ರಿಸ್ತನು ಮಾಡುತ್ತಿದ್ದ ಸಂಗತಿಗಳು ಅವನಿಗೆ ತಿಳಿಯಿತು. ಆದ್ದರಿಂದ ಯೋಹಾನನು ತನ್ನ ಕೆಲವು ಶಿಷ್ಯರನ್ನು ಯೇಸುವಿನ ಬಳಿಗೆ ಕಳುಹಿಸಿದನು.


ಅನೇಕರು ತಾವು ನಂಬಿಗಸ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ ನಿಜವಾಗಿಯೂ ನಂಬಿಗಸ್ತನಾಗಿರುವ ಒಬ್ಬನನ್ನು ಕಂಡುಕೊಳ್ಳುವುದು ಬಹುಕಷ್ಟ.


ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು