Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:3 - ಪರಿಶುದ್ದ ಬೈಬಲ್‌

3 ಅಲ್ಲಿದ್ದ ಧರ್ಮೋಪದೇಶಕರು ಇದನ್ನು ಕೇಳಿ, “ಇದು ದೇವದೂಷಣೆ” ಎಂದು ತಮ್ಮೊಳಗೆ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಿದ್ದಾನೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು - ಇವನು ದೇವದೂಷಣೆ ಮಾಡುತ್ತಾನೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಉಲ್ಲೆ ಮೊಯ್ಜೆಚಿ ಶಾಸ್ತರಾ ಶಿಕ್ವುತಲೆ ಥೈ ಹೊತ್ತೆ. ತೆನಿ “ಹ್ಯೊ ಮಾನುಸ್ ದೆವಾಚಿ ನಿಂದ್ಯಾ ಕರುಕ್ ಲಾಗ್ಲಾ”. ಮನುನ್ ಅಪ್ನಾಚ್ಯಾ ಮದ್ದಿ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:3
13 ತಿಳಿವುಗಳ ಹೋಲಿಕೆ  

ಪ್ರಧಾನಯಾಜಕನು ಇದನ್ನು ಕೇಳಿ ಬಹಳ ಕೋಪಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈ ಮನುಷ್ಯನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಯಾವ ಸಾಕ್ಷಿಗಳ ಅಗತ್ಯವೂ ಇಲ್ಲ. ಇವನು ಮಾಡಿದ ದೇವದೂಷಣೆಯನ್ನು ನೀವೇ ಕೇಳಿದಿರಿ.


ಯೆಹೂದ್ಯ ಧರ್ಮೋಪದೇಶಕರು ಮತ್ತು ಫರಿಸಾಯರು, “ಈ ಮನುಷ್ಯನು (ಯೇಸು) ಯಾರು? ಈತನು ದೇವರಿಗೆ ವಿರುದ್ಧವಾದ ಸಂಗತಿಗಳನ್ನು ಹೇಳುತ್ತಾನಲ್ಲಾ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಬಲ್ಲನು” ಎಂದು ತಮ್ಮತಮ್ಮೊಳಗೆ ಯೋಚಿಸಿದರು.


ಯಾವನಾದರೂ ಯೆಹೋವನ ನಾಮದ ವಿರುದ್ಧ ಮಾತಾಡಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಜನರೆಲ್ಲರೂ ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಯೆಹೋವನ ನಾಮವನ್ನು ನಿಂದಿಸುವ ಪರದೇಶಸ್ಥರಿಗೂ ಅದೇ ರೀತಿಯ ಶಿಕ್ಷೆಯಾಗಬೇಕು. ಯೆಹೋವನ ನಾಮವನ್ನು ನಿಂದಿಸುವವನಿಗೆ ಮರಣಶಿಕ್ಷೆಯಾಗಬೇಕು.


ಇವನು ದೇವರ ವಿರುದ್ಧವಾಗಿ ಹೇಳಿದ ಮಾತನ್ನು ನೀವೆಲ್ಲರೂ ಕೇಳಿದ್ದೀರಿ. ನಿಮ್ಮ ಅಭಿಪ್ರಾಯವೇನು?” ಎಂದು ಕೇಳಿದನು. ಯೇಸು ಅಪರಾಧಿಯೆಂತಲೂ ಆತನಿಗೆ ಮರಣದಂಡನೆ ಆಗಬೇಕೆಂತಲೂ ಜನರೆಲ್ಲರು ಹೇಳಿದರು.


ಒಬ್ಬ ವ್ಯಕ್ತಿಯ ಅಂತರಂಗದಲ್ಲಿ ಈ ಕೆಟ್ಟ ಆಲೋಚನೆಗಳೆಲ್ಲವೂ ಆರಂಭವಾಗುತ್ತವೆ: ದುರಾಲೋಚನೆ, ಲೈಂಗಿಕಪಾಪ, ಕಳ್ಳತನ, ಕೊಲೆ,


ಏಕೆಂದರೆ, ಆತನು ಧರ್ಮೋಪದೇಶಕರಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಉಪದೇಶಿಸಿದನು.


“ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು.


“ನಾನು ನಿಮಗೆ ಸತ್ಯವನ್ನು ಹೇಳುತ್ತಿದ್ದೇನೆ, ಜನರು ಮಾಡುವ ಎಲ್ಲಾ ಪಾಪಗಳಿಗೂ ದೇವದೂಷಣೆಗಳಿಗೂ ಕ್ಷಮೆ ದೊರೆಯಲು ಸಾಧ್ಯ.


ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆ ಇಲ್ಲವೇ ಇಲ್ಲ. ಅವರ ಪಾಪ ಶಾಶ್ವತವಾದದ್ದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು