ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.
ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲು ಸಾಧ್ಯವಾಗದ ಜನರು ಆಗ ಹರ್ಷಗಾನವನ್ನು ಹಾಡುವರು. ಯಾವಾಗ ಮರುಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವದು.