10 “ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.
10 “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
10 “ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.
10 ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.
10 “ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
“ಜನರ ನಾಯಕರು ಯೆಹೋವನನ್ನು ಹುಡುಕಾಡುವರು. ಅವರು ತಮ್ಮ ಕುರಿದನಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವರು. ಆದರೆ ಅವರು ಯೆಹೋವನನ್ನು ಕಂಡುಕೊಳ್ಳುವದಿಲ್ಲ. ಯಾಕೆಂದರೆ ಆತನು ಅವರನ್ನು ಬಿಟ್ಟುಹೋಗಿರುತ್ತಾನೆ.
ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”
ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.
ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.
ಕುರಿಗಳನ್ನು ನೋಡಿಕೊಳ್ಳುವುದಕ್ಕಾಗಿ ನೇಮಿತನಾಗಿರುವ ಕೂಲಿಯಾಳು ಕುರುಬನಿಗಿಂತ ಭಿನ್ನವಾಗಿದ್ದಾನೆ. ಕೂಲಿಯಾಳು ಕುರಿಗಳ ಒಡೆಯನಲ್ಲ. ಆದ್ದರಿಂದ ಕೂಲಿಯಾಳು ತೋಳ ಬರುವುದನ್ನು ಕಾಣುವಾಗ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳ ಮೇಲೆ ಬಿದ್ದು ಅವುಗಳನ್ನು ಚದರಿಸಿಬಿಡುತ್ತದೆ.
ಯೆಹೂದದ ಜನರ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: “ಯೆಹೂದದ ಜನರು ನನ್ನಿಂದ ದೂರವಾಗಲು ಮನಃಪೂರ್ವಕವಾಗಿ ಇಚ್ಛಿಸುತ್ತಾರೆ. ಅವರು ಮೊದಲಿಂದಲೂ ಹೀಗೆ ಮಾಡುತ್ತಲೇ ಇದ್ದಾರೆ. ಆದ್ದರಿಂದ ಈಗ ಯೆಹೋವನು ಅವರನ್ನು ಸ್ವಿಕರಿಸುವದಿಲ್ಲ. ಆತನು ಅವರ ದುಷ್ಕೃತ್ಯಗಳನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗಾಗಿ ಅವರನ್ನು ದಂಡಿಸುತ್ತಾನೆ.”
ನೀವು ಆ ಮೇಜಿನಿಂದ ಆಹಾರವನ್ನು ತೆಗೆದುಕೊಳ್ಳುವದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಆ ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವದಿಲ್ಲ.
ನೀವು ಅತ್ತು ಗೋಳಾಡಿ ಯೆಹೋವನ ವೇದಿಕೆಯನ್ನು ಕಣ್ಣೀರಿನಿಂದ ತೋಯಿಸಿದರೂ ಪ್ರಯೋಜನವಿಲ್ಲ. ಯೆಹೋವನು ನಿಮ್ಮ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ. ನಿಮ್ಮ ಕಾಣಿಕೆಗಳನ್ನು ಆತನು ಮೆಚ್ಚುವವನಲ್ಲ.