ಮಲಾಕಿ 1:11 - ಪರಿಶುದ್ದ ಬೈಬಲ್11 “ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.
“ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.