Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:13 - ಪರಿಶುದ್ದ ಬೈಬಲ್‌

13 ನೀವು ಆ ಮೇಜಿನಿಂದ ಆಹಾರವನ್ನು ತೆಗೆದುಕೊಳ್ಳುವದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಆ ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಯ್ಯೋ, ಎಷ್ಟು ಬೇಸರವಾದುದು ಈ ಸೇವೆ’ ಎಂದುಕೊಂಡು ನೀವು ಅದನ್ನು ತಾತ್ಸಾರಮಾಡುತ್ತೀರಿ. “ಕಳವಿನ ಪಶುವನ್ನು, ರೋಗ ಹಿಡಿದ, ಊನವಾದ ಪ್ರಾಣಿಯನ್ನು ಅರ್ಪಿಸುತ್ತೀರಿ. ಇಂಥ ಕಾಣಿಕೆಯನ್ನು ನಿಮ್ಮ ಕೈಗಳಿಂದ ನಾನು ಸ್ವೀಕರಿಸಲೋ?’ ಎಂದು ಕೇಳುತ್ತಾರೆ ಸೇನಾಧೀಶ್ವರ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, [ಈ ಸೇವೆಯು] ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ; ಕಳವಿನ ಪಶುವನ್ನೂ ಕುಂಟಾದದ್ದನ್ನೂ ರೋಗಿಯಾದದ್ದನ್ನೂ ತಂದೊಪ್ಪಿಸುತ್ತೀರಿ; ಇಂಥ ನೈವೇದ್ಯವನ್ನು ತಂದೊಪ್ಪಿಸುತ್ತಿರುವಲ್ಲಿ ನಾನು ಅದನ್ನು ನಿಮ್ಮ ಕೈಯಿಂದ ಸ್ವೀಕರಿಸಲೋ; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:13
28 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ನನ್ನ ಜನರೇ, ನಾನು ಮಾಡಿದ್ದೇನು ತಿಳಿಸಿರಿ. ನಿಮಗೆ ವಿರೋಧವಾಗಿ ನಾನು ಏನಾದರೂ ಮಾಡಿದ್ದೇನೋ? ನಿಮಗೆ ಜೀವಿಸಲು ಕಷ್ಟವಾಗುವಂತೆ ಮಾಡಿದ್ದೇನೋ?


“ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನೀವು ಅತ್ತು ಗೋಳಾಡಿ ಯೆಹೋವನ ವೇದಿಕೆಯನ್ನು ಕಣ್ಣೀರಿನಿಂದ ತೋಯಿಸಿದರೂ ಪ್ರಯೋಜನವಿಲ್ಲ. ಯೆಹೋವನು ನಿಮ್ಮ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ. ನಿಮ್ಮ ಕಾಣಿಕೆಗಳನ್ನು ಆತನು ಮೆಚ್ಚುವವನಲ್ಲ.


ವರ್ತಕರಾದ ನೀವು ಹೇಳುವುದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟ ಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.


ಯಾಜಕರು ಸ್ವಾಭಾವಿಕವಾಗಿ ಸತ್ತು ಅಥವಾ ವನ್ಯಜಂತುಗಳು ಕೊಂದಿರುವ ಯಾವ ಪ್ರಾಣಿಯಾಗಲಿ ಪಕ್ಷಿಯಾಗಲಿ ಅದರ ಮಾಂಸವನ್ನು ತಿನ್ನಬಾರದು.


ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”


ನದಿ ದಡದಲ್ಲಿರುವ ನುಣುಪಾದ ಕಲ್ಲುಗಳನ್ನು ಪೂಜಿಸಲು ಆಶಿಸುತ್ತೀರಿ. ಅದರ ಮೇಲೆ ದ್ರಾಕ್ಷಾರಸ ಸುರಿದು ಪೂಜೆ ಮಾಡುತ್ತೀರಿ. ಅವುಗಳಿಗೆ ಬಲಿಯರ್ಪಿಸುತ್ತೀರಿ. ಆದರೆ ಅದರಿಂದ ನಿಮಗೆ ದೊರಕುವುದು ಕಲ್ಲೇ. ಈ ವಿಷಯ ನನ್ನನ್ನು ಸಂತೋಷಗೊಳಿಸುತ್ತದೆಂದು ನೆನಸುತ್ತೀರೋ? ಇಲ್ಲ. ಅವು ನನ್ನನ್ನು ಸಂತೋಷಪಡಿಸುವದಿಲ್ಲ.


ನೀವು ನನ್ನನ್ನು ಸಂಧಿಸಲು ಬರುವಾಗ, ನನ್ನ ಪ್ರಾಕಾರಗಳನ್ನು ತುಳಿದುಹಾಕುವಿರಿ. ಹಾಗೆ ಮಾಡಲು ನಿಮಗೆ ಹೇಳಿದವರು ಯಾರು?


ಹೀಗಿರುವಾಗ ಆ ಯಜ್ಞಗಳನ್ನು ಮತ್ತು ಕಾಣಿಕೆಗಳನ್ನು ನೀವು ಗೌರವಿಸದಿರುವುದೇಕೇ? ನಿನ್ನ ಮಕ್ಕಳನ್ನು ನನಗಿಂತ ಹೆಚ್ಚು ಗೌರವಿಸುತ್ತಿರುವೆ. ಇಸ್ರೇಲರು ನನಗಾಗಿ ತರುವ ಯಜ್ಞಮಾಂಸದ ಉತ್ತಮ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಂಡಿರುವಿರಿ.’


“ಆದರೆ ಆ ಚೊಚ್ಚಲು ಪ್ರಾಣಿಗಳು ಕುಂಟಾಗಿದ್ದರೆ, ಕುರುಡಾಗಿದ್ದರೆ ಅಥವಾ ಬೇರೆ ಯಾವ ಅಂಗವಿಕಲತೆಗೆ ಒಳಗಾಗಿದ್ದರೆ, ನಿಮ್ಮ ದೇವರಾದ ಯೆಹೋವನಿಗೆ ಅವುಗಳನ್ನು ಸಮರ್ಪಿಸಕೂಡದು.


“ಯಾಜಕನು ಸತ್ತ ಪ್ರಾಣಿಯನ್ನಾಗಲಿ ಕ್ರೂರ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನಾಗಲಿ ತಿನ್ನಬಾರದು. ಅವನು ಅದನ್ನು ತಿಂದರೆ ಅಶುದ್ಧನಾಗುವನು. ನಾನೇ ಯೆಹೋವನು!


ಅವನು ತಾನು ಕದ್ದದ್ದನ್ನಾಗಲಿ ಮೋಸದಿಂದ ತೆಗೆದುಕೊಂಡದ್ದನ್ನಾಗಲಿ ಅಡವು ಇಟ್ಟುಕೊಂಡದ್ದನ್ನಾಗಲಿ ಕಂಡುಕೊಂಡ ಅಥವಾ ಕಳೆದುಹೋದ ವಸ್ತುವನ್ನಾಗಲಿ


ಆದರೆ ರಾಜನು ಅರೌನನಿಗೆ, “ಇಲ್ಲ, ನಾನು ನಿನಗೆ ಸತ್ಯವನ್ನು ಹೇಳುತ್ತಿದ್ದೇನೆ. ನಾನು ನಿನ್ನ ಭೂಮಿಗೆ ಬೆಲೆಯನ್ನು ಕೊಟ್ಟು ಕೊಂಡುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ನಾನು ನನ್ನ ದೇವರಾದ ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು. ಆದ್ದರಿಂದ ದಾವೀದನು ಕಣವನ್ನು ಮತ್ತು ಹೋರಿಗಳನ್ನು ಐವತ್ತು ಶೆಕೆಲ್‌ಗಳಿಗೆ ಕೊಂಡುಕೊಂಡನು.


ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


“ಇಸ್ರೇಲೇ, ನಾನು ನಿನಗೆ ಸಹಾಯ ಮಾಡಿದರೂ ನೀನು ನನಗೆ ವಿರೋಧವಾಗಿ ಎದ್ದಿರುವೆ. ಆದ್ದರಿಂದ ನಾನು ನಿನ್ನನ್ನು ನಾಶಮಾಡುವೆನು.


“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.


ಅಂಥಾ ಜನರನ್ನು ಯೆಹೋವನು ಯೆಹೂದ ವಂಶದಿಂದಲೇ ತೆಗೆದುಹಾಕುವನು. ಅವರು ಯೆಹೋವನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬರಬಹುದು. ಆದರೆ ಅದು ಏನೂ ಪ್ರಯೋಜನವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು