ಮಲಾಕಿ 1:4 - ಪರಿಶುದ್ದ ಬೈಬಲ್4 ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಏಸಾವನ ವಂಶದವರಾದ ಎದೋಮ್ಯರು, “ನಮ್ಮ ನಾಡು ಹಾಳಾಯಿತು; ಆದರೆ ಹಾಳುಬಿದ್ದದ್ದನ್ನು ಮರಳಿ ಕಟ್ಟುವೆವು,” ಎನ್ನಬಹುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರ ಕೊಡುವ ಉತ್ತರ ಇದು: “ಅವರು ಕಟ್ಟಲಿ; ನಾನು ಅವುಗಳನ್ನು ಕೆಡವಿಹಾಕುವೆ. ‘ಅವರು ಕೇಡಿಗರು. ಸರ್ವೇಶ್ವರಸ್ವಾಮಿಯ ಕೋಪಕ್ಕೆ ಗುರಿಯಾದವರು’ ಎಂದು ಜನರೇ ಆಡಿಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೀಗಿರಲು ಎದೋಮ್ಯರು - ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು ಅಂದುಕೊಂಡರೆ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅವರು ಕಟ್ಟಿದರೂ ನಾನು ಕೆಡವಿ ಹಾಕುವೆನು; ಅವರು ದುಷ್ಟ ಪ್ರಾಂತದವರೂ, ಯೆಹೋವನ ನಿತ್ಯಕೋಪಕ್ಕೆ ಈಡಾದ ಜನರೂ ಅನ್ನಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಎದೋಮ್ಯರು, “ನಾವು ಬಡಕಲಾದೆವು, ಆದರೆ ನಾವು ಮತ್ತೆ ಹಾಳಾದ ಸ್ಥಳಗಳನ್ನು ಕಟ್ಟುವೆವು,” ಎಂದು ಹೇಳಬಹುದು. ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು. ಜನರು ಅವರನ್ನು ದುಷ್ಟತನದ ನಾಡೆಂದೂ, ಯೆಹೋವ ದೇವರು ಎಂದೆಂದಿಗೂ ಸಿಟ್ಟು ಮಾಡುವ ಜನವೆಂದೂ ಕರೆಯುವರು. ಅಧ್ಯಾಯವನ್ನು ನೋಡಿ |
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.
ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”