Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:6 - ಪರಿಶುದ್ದ ಬೈಬಲ್‌

6 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:6
52 ತಿಳಿವುಗಳ ಹೋಲಿಕೆ  

“ನನ್ನನ್ನು ಸ್ವಾಮೀ, ಸ್ವಾಮೀ, ಎಂದು ಕರೆದು ನಾನು ಹೇಳುವುದನ್ನು ನಡಿಸದೆ ಇರುವುದೇಕೆ?


ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


“ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.


ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಈ ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ.


ಎಫ್ರಾಯೀಮು, ‘ನಾನು ಐಶ್ವರ್ಯವಂತನು. ನನ್ನಲ್ಲಿ ನಿಜವಾದ ಐಶ್ವರ್ಯವಿದೆ. ನನ್ನ ಅಪರಾಧಗಳನ್ನು ಯಾರೂ ಕಂಡುಹಿಡಿಯಲಾರರು. ನನ್ನ ದುಷ್ಟತ್ವದ ಬಗ್ಗೆ ಯಾರಿಗೂ ತಿಳಿಯದು’ ಎಂದು ಅನ್ನುತ್ತಾನೆ.


ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೋ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು.


ದೇವಾಜ್ಞೆಯು ಹೇಳುವಂತೆ, “ನೀವು ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು.” ಈ ಮೊದಲನೆಯ ಆಜ್ಞೆಯು ವಾಗ್ದಾನವನ್ನು ಒಳಗೊಂಡಿದೆ.


ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ.


“‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.


ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ಹೆಸರು ಪರಿಶುದ್ಧವಾಗಿರಲಿ.


ಕೆಲವರು ತಮ್ಮ ತಂದೆಗಳನ್ನು ಶಪಿಸುವರು. ತಮ್ಮ ತಾಯಂದಿರನ್ನು ಆಶೀರ್ವದಿಸುವುದಿಲ್ಲ.


‘ನಿಮ್ಮ ತಂದೆತಾಯಿಗಳನ್ನು ನೀವು ಸನ್ಮಾನಿಸಬೇಕು. ಇದು ನಿಮ್ಮ ದೇವರ ಆಜ್ಞೆ. ನೀವು ಇದಕ್ಕೆ ವಿಧೇಯರಾದರೆ ದೇವರು ನಿಮಗೆ ಕೊಡುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ ಮತ್ತು ನಿಮಗೆ ಯಾವಾಗಲೂ ಶುಭವಿರುವುದು.


“ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು!


ನೀನು ನಿತ್ಯಜೀವ ಹೊಂದಬೇಕಾದರೆ ನಿನಗೆ ತಿಳಿದೇ ಇರುವ ಈ ಆಜ್ಞೆಗಳನ್ನು ಪಾಲಿಸು: ‘ಕೊಲೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳು ಹೇಳಬೇಡ, ಮೋಸ ಮಾಡಬೇಡ, ಅಲ್ಲದೆ ನಿನ್ನ ತಂದೆತಾಯಿಯರನ್ನು ಸನ್ಮಾನಿಸು’” ಎಂದು ಉತ್ತರಿಸಿದನು.


ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು ನಿನ್ನನ್ನು ನೀನು ಪ್ರೀತಿಸುವಂತೆ ಬೇರೆಯವರನ್ನೂ ಪ್ರೀತಿಸಬೇಕು” ಎಂದು ಉತ್ತರಕೊಟ್ಟನು.


“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.


“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.


“ಪ್ರವಾದಿಗಳೂ ಯಾಜಕರೂ ದುಷ್ಟರಾಗಿದ್ದಾರೆ. ಅವರು ನನ್ನ ಪವಿತ್ರಾಲಯದಲ್ಲಿಯೇ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಇದು ಯೆಹೋವನಿಂದ ಬಂದ ಸಂದೇಶ.


ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ.


“ಆದರೆ ಯಾಜಕರೇ, ನೀವು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿ ಬಿಟ್ಟಿರಿ. ಅನೇಕ ಜನರು ತಪ್ಪು ದಾರಿಯಲ್ಲಿ ಹೋಗುವಂತೆ ಮಾಡಲು ನೀವು ಉಪದೇಶವನ್ನು ಬಳಸಿಕೊಂಡಿರಿ. ಲೇವಿಯೊಂದಿಗೆ ಮಾಡಿದ ಒಡಂಬಡಿಕೆಯನ್ನು ನೀವು ಹಾಳುಮಾಡಿಬಿಟ್ಟಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆದರೆ ಆ ಮನುಷ್ಯನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳಲು ಬಯಸಿ, ಯೇಸುವಿಗೆ, “ನಾನು ಪ್ರೀತಿಸಬೇಕಾದ ನೆರೆಯವರು ಯಾರು?” ಎಂದು ಕೇಳಿದನು.


ನಿಮ್ಮ ಪರಲೋಕದ ತಂದೆಯು ಕರುಣಾಮಯನಾಗಿರುವಂತೆ ನೀವೂ ಕರುಣೆಯುಳ್ಳವರಾಗಿರಿ.


‘ನಿಮ್ಮ ತಂದೆತಾಯಿಗಳನ್ನು ಗೌರವಿಸಿರಿ’ ಎಂತಲೂ ‘ಯಾವ ವ್ಯಕ್ತಿಯಾದರೂ ತನ್ನ ತಂದೆತಾಯಿಗಳಿಗೆ ಕೆಟ್ಟದ್ದನ್ನು ನುಡಿದರೆ ಅವನಿಗೆ ಮರಣದಂಡನೆ ಆಗಬೇಕು’ ಎಂತಲೂ ಮೋಶೆಯು ಹೇಳಿದ್ದಾನೆ.


ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.


ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ‘ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’” ಎಂದನು.


‘ನಿಮ್ಮ ತಂದೆತಾಯಿಗಳಿಗೆ ಗೌರವ ನೀಡಿ’ ಎಂಬುದು ದೇವರ ಆಜ್ಞೆ. ‘ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೀನೈಸಿದರೆ ಅವನನ್ನು ಕೊಲ್ಲಬೇಕು’ ಎಂಬುದೂ ದೇವರ ಆಜ್ಞೆ.


“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.


ಅಡವಿಗಳಲ್ಲಿಯೂ ಮರುಭೂಮಿಗಳಲ್ಲಿಯೂ ಮನುಷ್ಯನು ತನ್ನ ಮಗುವನ್ನು ಹೊತ್ತುಕೊಂಡು ತರುವಂತೆ ದೇವರಾದ ಯೆಹೋವನು ನಿಮ್ಮನ್ನು ಹೊತ್ತುಕೊಂಡು ತಂದಿದ್ದಾನೆ. ಈ ಸ್ಥಳಕ್ಕೆ ಸುರಕ್ಷಿತವಾಗಿ ನಿಮ್ಮನ್ನು ತಂದು ಮುಟ್ಟಿಸಿದ್ದಾನೆ’ ಎಂದು ಹೇಳಿದೆನು.


ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು.


ಮೊಮ್ಮಕ್ಕಳು ವೃದ್ಧರಿಗೆ ಸಂತೋಷ. ಮಕ್ಕಳಿಗೆ ತಮ್ಮ ತಂದೆತಾಯಿಗಳ ಬಗ್ಗೆ ಹೆಮ್ಮೆ.


ನಿನ್ನ ಕುರಿಗಳನ್ನು ನನ್ನ ಬಳಿಗೆ ಯಜ್ಞಮಾಡುವದಕ್ಕಾಗಿ ತರಲಿಲ್ಲ. ನೀನು ನನ್ನನ್ನು ಸನ್ಮಾನಿಸಲಿಲ್ಲ. ನೀನು ನನಗೆ ಬಲಿಯರ್ಪಣೆ ಮಾಡಲಿಲ್ಲ. ನೀನು ಬಲಿಯರ್ಪಣೆ ಮಾಡಬೇಕೆಂದು ನಾನು ನಿನ್ನನ್ನು ಬಲವಂತಪಡಿಸಲಿಲ್ಲ. ನೀನು ಆಯಾಸಗೊಳ್ಳುವ ತನಕ ಧೂಪಹಾಕಬೇಕೆಂದು ನಾನು ನಿನ್ನನ್ನು ಒತ್ತಾಯಪಡಿಸಲಿಲ್ಲ.


ಆದರೆ ಈಗ ನೀನು, ‘ನನ್ನ ತಂದೆಯೇ, ನಾನು ಚಿಕ್ಕ ಮಗು ಆದಾಗಿನಿಂದ ನೀನು ನನ್ನ ಪ್ರೀತಿಯ ಸ್ನೇಹಿತನಾಗಿದ್ದೆ’ ಎಂದು ಕೂಗುತ್ತಲಿರುವೆ.


ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರು ವಿಧಿಸಿದ ಆಜ್ಞೆಗಳನ್ನು ಪಾಲಿಸಿದರು. ಆದರೆ ಯೆಹೂದದ ಜನರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.’


ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.


“ಯಾಜಕರೇ, ನನ್ನ ಮಾತನ್ನು ಕೇಳಿರಿ. ನಾನು ಹೇಳುವುದಕ್ಕೆ ಗಮನ ಕೊಡಿರಿ. ಈ ನಿಯಮಗಳನ್ನು ನಿಮಗಾಗಿ ಹೇಳುತ್ತಿದ್ದೇನೆ.


ನಮಗೆಲ್ಲರಿಗೂ ಒಬ್ಬನೇ ತಂದೆಯಾದ ದೇವರು. ಆ ದೇವರೇ ನಮ್ಮೆಲ್ಲರನ್ನು ಉಂಟುಮಾಡಿದನು. ಹೀಗಿರುವಾಗ ಜನರು ತಮ್ಮ ಸಹೋದರರನ್ನು ಯಾಕೆ ಮೋಸಪಡಿಸುತ್ತಾರೆ? ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡುವವರೆಂದು ಜನರಿಗೆ ತೋರಿಸುವದಿಲ್ಲ. ತಮ್ಮ ಪೂರ್ವಿಕರು ಯೆಹೋವನೊಂದಿಗೆ ಮಾಡಿದ್ದ ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡಲಿಲ್ಲ.


ಹೀಗೆ ಆತನು ನಿಮಗೆ ಮಾಡಿದ ಒಳ್ಳೆಯದಕ್ಕೆ ಉಪಕಾರ ತೋರಿಸುವಿರಾ? ಇಲ್ಲ! ನೀವು ಬುದ್ಧಿಹೀನರಾಗಿದ್ದೀರಿ. ಯೆಹೋವನು ನಿಮ್ಮ ತಂದೆಯಾಗಿದ್ದಾನೆ. ಆತನೇ ನಿಮ್ಮನ್ನು ನಿರ್ಮಿಸಿದಾತನು. ಆತನೇ ನಿಮ್ಮನ್ನು ಉಂಟುಮಾಡಿದಾತನು. ಆತನೇ ಆಧಾರ ನೀಡುವಾತನು.


ತಂದೆಯು ಮಕ್ಕಳನ್ನು ಹುಟ್ಟಿಸುತ್ತಾನೆ. ಮಕ್ಕಳು ತಂದೆಯನ್ನು, ‘ನನಗೆ ಜೀವ ಯಾಕೆ ಕೊಟ್ಟೆ?’ ಎಂದು ಕೇಳಲಾಗುವುದಿಲ್ಲ. ಮಕ್ಕಳು ತಮ್ಮ ತಾಯಿಗೆ, ‘ನನ್ನನ್ನು ಯಾಕೆ ಹೆತ್ತದ್ದು ಎಂದು ಕೇಳಲಾಗುವುದಿಲ್ಲ.’”


ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು