ಮಲಾಕಿ 1:8 - ಪರಿಶುದ್ದ ಬೈಬಲ್8 ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸುವನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕುರುಡಾದ ಪಶುಗಳನ್ನು ಬಲಿಯರ್ಪಿಸುವುದು ತಪ್ಪಲ್ಲವೆ? ಊನವಾದ ರೋಗದ ಪಶುಗಳನ್ನು ಅರ್ಪಿಸುವುದು ದೋಷವಲ್ಲವೇ? ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ಇಂಥದ್ದನ್ನು ನಿಮ್ಮ ರಾಜಪಾಲನಿಗೆ ಕಾಣಿಕೆಯಾಗಿ ಕೊಟ್ಟರೆ ಅವನು ನಿಮ್ಮನ್ನು ಮೆಚ್ಚುವನೋ ಅಥವಾ ನಿಮ್ಮ ಕೋರಿಕೆಯನ್ನು ನೆರವೇರಿಸುವನೋ?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ ರೋಗದ ಪಶುವನ್ನೂ ಅರ್ಪಿಸುವದು ದೋಷವಲ್ಲವೆಂದು ನಂಬುತ್ತೀರೋ? ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಂಥದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ, ಕುರುಡಾದ ಪಶುಗಳನ್ನು ಬಲಿಗಾಗಿ ಅರ್ಪಿಸಿದರೆ, ಅದು ದೋಷವಲ್ಲವೋ? ಕುಂಟಾದ ಮತ್ತು ರೋಗವುಳ್ಳ ಪಶುಗಳನ್ನು ಅರ್ಪಿಸಿದರೆ, ಅದು ಕೆಟ್ಟದ್ದಲ್ಲವೋ? “ಅದನ್ನು ನಿನ್ನ ರಾಜ್ಯಪಾಲನಿಗೆ ಅರ್ಪಿಸು, ಅವನು ನಿನ್ನನ್ನು ಮೆಚ್ಚುವನೋ? ನಿಮ್ಮನ್ನು ಸ್ವೀಕಾರ ಮಾಡುವನೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.