ಮಲಾಕಿ 1:9 - ಪರಿಶುದ್ದ ಬೈಬಲ್9 “ಯಾಜಕರೇ, ಯೆಹೋವನು ನಮಗೆ ಶುಭವನ್ನು ಉಂಟುಮಾಡುವಂತೆ ಆತನನ್ನು ಕೇಳಿಕೊಳ್ಳಿರಿ. ಆದರೆ ಆತನು ನಿಮಗೆ ಕಿವಿಗೊಡುವುದಿಲ್ಲ. ನಿಮ್ಮ ತಪ್ಪು ದೋಷಗಳೇ ಅದಕ್ಕೆ ಕಾರಣ.” ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದುದರಿಂದ ಯಾಜಕರೇ, ದೇವರ ದಯೆ ನಿಮಗೆ ದೊರಕುವಂತೆ ಅವರನ್ನು ಒಲಿಸಿಕೊಳ್ಳಿರಿ. ಇಂಥ ಕಾಣಿಕೆ ನಿಮ್ಮ ಕೈಯಲ್ಲಿದ್ದರೆ ಯಾರಿಗಾದರು ದೇವರು ನಿಮ್ಮ ಕೋರಿಕೆಯನ್ನು ಈಡೇರಿಸುವುದುಂಟೋ? ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿನಗೆ ಮೆಚ್ಚುವನೋ? ಪ್ರಸನ್ನನಾಗುವನೋ? ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಒಲಿಸಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ? ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ. ನಿಮ್ಮ ಕೈಗಳಿಂದ ಅಂಥ ಅರ್ಪಣೆಯನ್ನು ಅವರು ಸ್ವೀಕರಿಸುವರೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.
“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”
ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.