ಮಲಾಕಿ 2:10 - ಪರಿಶುದ್ದ ಬೈಬಲ್10 ನಮಗೆಲ್ಲರಿಗೂ ಒಬ್ಬನೇ ತಂದೆಯಾದ ದೇವರು. ಆ ದೇವರೇ ನಮ್ಮೆಲ್ಲರನ್ನು ಉಂಟುಮಾಡಿದನು. ಹೀಗಿರುವಾಗ ಜನರು ತಮ್ಮ ಸಹೋದರರನ್ನು ಯಾಕೆ ಮೋಸಪಡಿಸುತ್ತಾರೆ? ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡುವವರೆಂದು ಜನರಿಗೆ ತೋರಿಸುವದಿಲ್ಲ. ತಮ್ಮ ಪೂರ್ವಿಕರು ಯೆಹೋವನೊಂದಿಗೆ ಮಾಡಿದ್ದ ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಮ್ಮೆಲ್ಲರಿಗೂ ಒಬ್ಬನೇ ತಂದೆಯಷ್ಟೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಸಿದನಲ್ಲಾ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸುವದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬರೇ ದೇವರು ಸೃಷ್ಟಿಸಿದರಲ್ಲವೋ? ಏಕೆ ಪ್ರತಿಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಾಗಿ ನಡೆದು, ನಮ್ಮ ತಂದೆಗಳ ಒಡಂಬಡಿಕೆಯನ್ನು ಮುರಿಯುವುದೇಕೆ? ಅಧ್ಯಾಯವನ್ನು ನೋಡಿ |
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.