Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:11 - ಪರಿಶುದ್ದ ಬೈಬಲ್‌

11 ಯೆಹೂದದ ಜನರು ಬೇರೆ ಜನರಿಗೆ ಮೋಸ ಮಾಡಿದರು. ಜೆರುಸಲೇಮಿನಲ್ಲಿಯೂ ಇಸ್ರೇಲಿನಲ್ಲಿಯೂ ಇರುವ ಜನರು ಭಯಂಕರ ಕೃತ್ಯಗಳನ್ನು ಮಾಡಿದರು. ದೇವರು ತನ್ನ ಆಲಯವನ್ನು ಪ್ರೀತಿಸುತ್ತಾನೆ. ಆದರೆ ಯೆಹೂದದ ಜನರು ಗೊತ್ತಿಲ್ಲದ ದೇವತೆಗಳನ್ನು ಪೂಜಿಸಲು ಪ್ರಾರಂಭಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜುದೇಯದ ಜನರು ದ್ರೋಹಮಾಡಿದ್ದಾರೆ. ಇಸ್ರಯೇಲಿನಲ್ಲಿಯೂ ಜೆರುಸಲೇಮಿನಲ್ಲಿಯೂ ದುರಾಚಾರ ನಡೆಯುತ್ತಿದೆ. ಯೆಹೂದ್ಯರು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ, ಸರ್ವೇಶ್ವರಸ್ವಾಮಿಗೆ ಪ್ರಿಯವಾದ ದೇವಾಲಯವನ್ನು ಹೊಲೆಗೆಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ ಯೆರೂಸಲೇವಿುನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯ ಮಗಳನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ. ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ, ಏಕೆಂದರೆ ಯೆಹೂದವು ಯೆಹೋವ ದೇವರು ಪ್ರೀತಿಮಾಡಿದ ಪರಿಶುದ್ಧ ಆಲಯವನ್ನು ಅಪವಿತ್ರ ಮಾಡಿ, ಅನ್ಯದೇವತೆಗಳನ್ನು ಆರಾಧಿಸುವ ಮಹಿಳೆಯರನ್ನು ಮದುವೆ ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:11
27 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಆದರೆ ಜನರು ಆದಾಮನಂತೆ ಒಡಂಬಡಿಕೆಯನ್ನು ಮುರಿದುಹಾಕಿದರು. ಅವರ ದೇಶದಲ್ಲಿ ಅವರು ನನಗೆ ದ್ರೋಹಿಗಳಾದರು.


ಇಂತಹ ಪಾಪಗಳನ್ನು ತಮ್ಮ ನೆರೆಯವನ ಹೆಂಡತಿಯೊಂದಿಗೆ ನಡಿಸುತ್ತಾರೆ. ಒಬ್ಬನು ತನ್ನ ಸ್ವಂತ ಸೊಸೆಯೊಂದಿಗೆ ಮಲಗಿ ಆಕೆಯನ್ನು ಅಶುದ್ಧಳನ್ನಾಗಿ ಮಾಡಿದನು. ಮತ್ತೊಬ್ಬನು ತನ್ನ ತಂದೆಯ ಮಗಳು, ತನ್ನ ತಂಗಿಯನ್ನೇ ಬಲವಂತದಿಂದ ಕೆಡಿಸಿರುತ್ತಾನೆ.


ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.


ನೀವು ಈ ಪಾಪಗಳನ್ನು ಮಾಡುತ್ತಿದ್ದರೂ ನನ್ನ ಹೆಸರಿನಿಂದ ಕರೆಯಲ್ಪಡುವ ಈ ಆಲಯದಲ್ಲಿ ನನ್ನ ಎದುರಿಗೆ ನಿಲ್ಲಬಹುದೆಂದು ಭಾವಿಸಿರುವಿರಾ? ನೀವು ನನ್ನ ಸಮ್ಮುಖದಲ್ಲಿ ನಿಂತುಕೊಂಡು, “ನಾವು ಸುರಕ್ಷಿತರಾಗಿದ್ದೇವೆ” ಎಂದು ಹೇಳಿಕೊಂಡು ನಿಮ್ಮ ದುಷ್ಕೃತ್ಯಗಳನ್ನು ಮುಂದುವರಿಸಬಹುದೆಂದು ಭಾವಿಸಿರುವಿರಾ?


ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. ಅವರು ಯೆಹೋವನ ಬೆಳೆಯ ಪ್ರಥಮ ಫಲವಾಗಿದ್ದರು. ಇಸ್ರೇಲಿನ ಜನರನ್ನು ಪೀಡಿಸಲು ಪ್ರಯತ್ನಿಸಿದವರನ್ನು ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.’” ಇದು ಯೆಹೋವನ ಸಂದೇಶ.


ಬಳಿಕ ಬಾಳ್ ಪೆಗೋರಿನಲ್ಲಿ ದೇವಜನರು ಬಾಳನನ್ನು ಪೂಜಿಸಲು ಸೇರಿಕೊಂಡರು. ಜೀವವಿಲ್ಲದ ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ದೇವಜನರು ತಿಂದರು.


ಆಗ ಏಲಾಮನ ಸಂತತಿಯವನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ ಹೀಗೆಂದನು: “ನಾವು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾವು ಅನ್ಯಜನರೊಂದಿಗೆ ಮದುವೆಯಾಗಿದ್ದೇವೆ. ಹಾಗಿದ್ದರೂ ಇಸ್ರೇಲರಿಗೆ ಒಂದು ನಿರೀಕ್ಷೆ ಇದೆ.


ಆದ್ದರಿಂದ ಇಸ್ರೇಲ್ ಜನರೇ, ನಿಮ್ಮ ಮಕ್ಕಳು ಅವರ ಮಕ್ಕಳನ್ನು ಮದುವೆಯಾಗಲು ಬಿಡಬೇಡಿ. ಅವರ ಸಹವಾಸ ಮಾಡಬೇಡಿರಿ. ಅವರ ವಸ್ತುಗಳನ್ನು ಆಶಿಸಬೇಡಿರಿ. ನನ್ನ ಕಟ್ಟಳೆಗಳನ್ನು ಪಾಲಿಸಿರಿ; ಆಗ ನೀವು ಬಲಶಾಲಿಗಳಾಗಿ ಈ ದೇಶವನ್ನು ಅನುಭವಿಸುವಿರಿ. ಈ ದೇಶವನ್ನು ನೀನು ಇಟ್ಟುಕೊಂಡವರಾಗಿ ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವಿರಿ.’


ಇಸ್ರೇಲರು ಅವರ ಕನ್ಯೆಯರನ್ನು ಮದುವೆಯಾಗ ತೊಡಗಿದರು ಮತ್ತು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟರು ಮತ್ತು ಅವರ ದೇವರುಗಳನ್ನು ಪೂಜಿಸಲು ಪ್ರಾರಂಭಿಸಿದರು.


ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.


ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿ, ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. ಆದ್ದರಿಂದ ನೀವು ಪರಿಶುದ್ಧರಾಗಿರಬೇಕು. ಯಾಕೆಂದರೆ ನಾನು ಯೆಹೋವನು ಮತ್ತು ನಾನು ಪರಿಶುದ್ಧನಾಗಿದ್ದೇನೆ.


ದೇವರಿಂದ ಬಂದ ಸಂದೇಶ. ಯೆಹೋವ ದೇವರು ಮಲಾಕಿಯ ಮೂಲಕ ಇಸ್ರೇಲರಿಗೆ ಕೊಟ್ಟ ಸಂದೇಶ.


ಇಸ್ರೇಲಿಗೆ ಇಷ್ಟೆಲ್ಲಾ ದಂಡನೆ ಆದರೂ ಅವಳ ಸೋದರಿಯಾದ ಯೆಹೂದ ತುಂಬುಹೃದಯದಿಂದ ನನ್ನಲ್ಲಿಗೆ ಬರಲಿಲ್ಲ. ಅವಳು ನನ್ನಲ್ಲಿಗೆ ತಿರುಗಿ ಬರುವ ನಟನೆಯನ್ನು ಮಾತ್ರ ಮಾಡಿದಳು. ಇದು ಯೆಹೋವನಾದ ನನ್ನ ನುಡಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು