ಮಲಾಕಿ 2:14 - ಪರಿಶುದ್ದ ಬೈಬಲ್14 “ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದೇಕೆ ಅನ್ನುತ್ತೀರಾ? ನಿನಗೂ ನಿನ್ನ ಯೌವನದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ. ನಿನ್ನ ಸಹಚಾರಿಣಿಯೂ ನಿನ್ನ ಒಡಂಬಡಿಕೆಯ ಪತ್ನಿಯೂ ಆದ ಆಕೆಗೆ ದ್ರೋಹಮಾಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೂ ಯೆಹೋವ ದೇವರು ನಿನಗೂ, ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿದ್ದರು. ಆದರೂ ನಿನ್ನ ಜೊತೆಯವಳೂ, ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದವಳಿಗೆ ನೀನು ಅಪನಂಬಿಗಸ್ತನಾಗಿದ್ದೀ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.