15 ದೇವರ ಇಚ್ಫೆಗನುಸಾರವಾಗಿ ಗಂಡಹೆಂಡತಿಯರು ದೇಹದಲ್ಲಿಯೂ ಆತ್ಮದಲ್ಲಿಯೂ ಒಂದಾಗಿರಬೇಕು. ಆಗ ಅವರ ಮಕ್ಕಳೂ ಪರಿಶುದ್ಧರಾಗಿರುವರು. ಆದ್ದರಿಂದ ಆತ್ಮಿಕ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಹೆಂಡತಿಯರಿಗೆ ಮೋಸಮಾಡಬೇಡಿ. ಯಾಕೆಂದರೆ ಯೌವನ ಪ್ರಾಯದಿಂದಲೂ ಆಕೆ ನಿಮ್ಮ ಹೆಂಡತಿಯಾಗಿದ್ದಾಳೆ.
15 ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”
15 ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.
15 ಪರಮಾತ್ಮಾಂಶನಾದ ಯಾವನೂ ಹೀಗೆ ಮಾಡಲಿಲ್ಲ; ಆ ಪ್ರಸಿದ್ಧನೊಬ್ಬನು ಏಕೆ ಇಂಥ ಕೃತ್ಯಮಾಡಿದನು? ದೇವರ ವರವಾದ ಸಂತಾನವನ್ನು ಹಾರೈಸಿಯೇ. ಹೀಗಿರಲು ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ಯಾವನೂ ತನ್ನ ಯೌವನದ ಪತ್ನಿಗೆ ದ್ರೋಹಮಾಡದಿರಲಿ.
15 ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.
“ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.
ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ತನ್ನ ಕ್ರೈಸ್ತ ಹೆಂಡತಿಯ ಮೂಲಕ ಪವಿತ್ರನಾಗುತ್ತಾನೆ. ಅದೇರೀತಿ, ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯು ತನ್ನ ಕ್ರೈಸ್ತ ಗಂಡನ ಮೂಲಕ ಪವಿತ್ರಳಾಗುತ್ತಾಳೆ. ಇದು ಸತ್ಯವಾಗಿಲ್ಲದಿದ್ದರೆ, ನಿಮ್ಮ ಮಕ್ಕಳು ಪವಿತ್ರರಾಗುತ್ತಿರಲಿಲ್ಲ. ಆದರೆ ಈಗ ನಿಮ್ಮ ಮಕ್ಕಳು ಪವಿತ್ರರಾಗಿದ್ದಾರೆ.
ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.
“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.
ಯಾಕೆಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶಮಾಡುವನು.
ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.
ಆ ಪ್ರವಾದಿಗಳು ಹೇಳಿದ ಸಂಗತಿಗಳನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಪ್ಪಂದವನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃವಾದ ಅಬ್ರಹಾಮನಿಗೆ, ‘ನಿನ್ನ ಸಂತತಿಯಿಂದ ಭೂಮಿಯ ಮೇಲಿರುವ ಜನರೆಲ್ಲರು ಆಶೀರ್ವಾದ ಹೊಂದುವರು’ ಎಂದು ಹೇಳಿದನು.
ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.
ಇದನ್ನು ನೋಡಿ ದೇವರ ಕಟ್ಟಳೆಗಳನ್ನು ಗೌರವಿಸುವ ಪ್ರತಿಯೊಬ್ಬನು ಭಯಪಟ್ಟನು; ನಡುಗಿದನು. ಯಾಕೆಂದರೆ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರೇಲರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾನೂ ನನ್ನೊಂದಿಗಿದ್ದ ಜನರೂ ಸಾಯಂಕಾಲದ ಯಜ್ಞವನ್ನರ್ಪಿಸುವ ಸಮಯದ ತನಕ ಹಾಗೆಯೇ ಕುಳಿತಿದ್ದೆವು.
ನಂತರ ರೆಬೆಕ್ಕಳು ಇಸಾಕನಿಗೆ, “ನಿನ್ನ ಮಗನಾದ ಏಸಾವನು ಹಿತ್ತಿಯರ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದಾನೆ. ಆ ಸ್ತ್ರೀಯರಿಂದ ನನಗೆ ಸಾಕಾಗಿ ಹೋಗಿದೆ; ಯಾಕೆಂದರೆ ಅವರು ನಮ್ಮ ಜನರಲ್ಲ. ಯಾಕೋಬನು ಸಹ ಇಂಥ ಸ್ತ್ರೀಯರಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡರೆ ನಾನು ಸಾಯುವುದೇ ಮೇಲು” ಎಂದು ಹೇಳಿದಳು.
ಅವಳು ನನಗೆ, “ನೀನೂ ನೀರನ್ನು ಕುಡಿ, ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ” ಎಂದು ಹೇಳಿದರೆ, ನನ್ನ ಒಡೆಯನ ಮಗನಿಗೆ ಯೆಹೋವನು ಆರಿಸಿಕೊಂಡಿರುವ ಕನ್ನಿಕೆ ಇವಳೇ ಎಂಬುದಾಗಿ ತಿಳಿದುಕೊಳ್ಳುವೆ’ ಎಂದು ಪ್ರಾರ್ಥಿಸಿದೆ.
“ಒಬ್ಬನು ನೆರೆಯವನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಹೊಂದಿದರೆ, ಆಗ ಅವರಿಬ್ಬರೂ ವ್ಯಭಿಚಾರ ಮಾಡಿದ ದೋಷಿಗಳಾಗಿದ್ದಾರೆ. ಆದ್ದರಿಂದ ಅವರಿಬ್ಬರಿಗೂ ಅಂದರೆ ಗಂಡಸಿಗೂ ಹೆಂಗಸಿಗೂ ಮರಣಶಿಕ್ಷೆಯಾಗಬೇಕು!
ತಾಮಾರಳು ಯೆಹೂದನ ಮಗನಾದ ಪೆರೆಚನಿಗೆ ಜನ್ಮಕೊಟ್ಟಳು. ಅದರಿಂದ ಅವನ ಕುಟುಂಬವು ಅಭಿವೃದ್ಧಿ ಹೊಂದಿತು. ಹಾಗೆಯೇ ರೂತಳಿಂದ ಯೆಹೋವನು ನಿನಗೆ ಹಲವಾರು ಮಕ್ಕಳನ್ನು ಕೊಡಲಿ; ಅವನಂತೆಯೇ ನಿನ್ನ ಕುಟುಂಬವೂ ಅಭಿವೃದ್ಧಿ ಹೊಂದಲಿ” ಎಂದು ಆಶೀರ್ವದಿಸಿದರು.
ಏಲಿಯು ಎಲ್ಕಾನನನ್ನು ಮತ್ತು ಅವನ ಹೆಂಡತಿಯಾದ ಹನ್ನಳನ್ನು ಆಶೀರ್ವದಿಸಿ, “ಹನ್ನಳು ಯೆಹೋವನನ್ನು ಪ್ರಾರ್ಥಿಸಿ ಪಡೆದ ಮಗನನ್ನು ಆತನಿಗೆ ಒಪ್ಪಿಸಿದ್ದರಿಂದ ಯೆಹೋವನು ಅವಳಿಗೆ ಬೇರೆ ಮಕ್ಕಳನ್ನು ಅನುಗ್ರಹಿಸಲಿ” ಎಂದು ಹೇಳಿದನು. ಆಮೇಲೆ ಎಲ್ಕಾನ ಮತ್ತು ಹನ್ನ ಮನೆಗೆ ಹೋದರು.