ಮಲಾಕಿ 2:17 - ಪರಿಶುದ್ದ ಬೈಬಲ್17 ನೀವು ತಪ್ಪಾದ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಯೆಹೋವನನ್ನು ದುಃಖಗೊಳಿಸಿದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿದ್ದೀರಿ. ಅಲ್ಲದೆ ಪಾಪಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ; ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು, ಅವರೇ ಆತನಿಗೆ ಇಷ್ಟ, ನ್ಯಾಯತೀರಿಸುವ ದೇವರು ಎಲ್ಲಿಯೋ ಎಂದು ನೀವು ಅಂದುಕೊಳ್ಳುವದರಲ್ಲಿಯೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.” ಅಧ್ಯಾಯವನ್ನು ನೋಡಿ |
ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.
“ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.