Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:5 - ಪರಿಶುದ್ದ ಬೈಬಲ್‌

5 ಯೆಹೋವನು ಹೀಗೆನ್ನುತ್ತಾನೆ, “ಆ ಒಡಂಬಡಿಕೆಯನ್ನು ನಾನು ಲೇವಿಯರೊಂದಿಗೆ ಮಾಡಿದೆನು. ನಾನು ಅವನಿಗೆ ಜೀವ ಮತ್ತು ಸಮಾಧಾನವನ್ನು ವಾಗ್ದಾನ ಮಾಡಿ ಅವನಿಗೆ ಅದನ್ನು ಕೊಟ್ಟೆನು. ಲೇವಿಯು ನನ್ನನ್ನು ಘನಪಡಿಸಿದನು. ನನ್ನ ಹೆಸರನ್ನು ಗೌರವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ, ಸುಖ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದೆನು. ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಹೆದರಿ ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ ತರುವಂಥ ಒಡಂಬಡಿಕೆ. ಅವರು ಭಯಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದ್ದು. ಅಂತೆಯೇ ಹಿಂದೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನಡೆದುಕೊಂಡರು; ನನ್ನ ನಾಮಕ್ಕೆ ಅಂಜಿ ಬಾಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ [ವಾಗ್ದಾನ ಮಾಡಿದ್ದು] ಜೀವ, ಸುಖ; ಅದರಂತೆ ಇವುಗಳನ್ನು ಅವರಿಗೆ ದಯಪಾಲಿಸಿದೆನು; [ಒಡಂಬಡಿಕೆಯಲ್ಲಿ ವಿಧಿಸಿದ್ದು] ಭಯಭಕ್ತಿ; ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನಮ್ಮ ಒಡಂಬಡಿಕೆಯು ಜೀವದ ಹಾಗೂ ಶಾಂತಿಯ ಒಡಂಬಡಿಕೆಯಾಗಿತ್ತು. ಅವುಗಳನ್ನು ನಾನೇ ಅವನಿಗೆ ಕೊಟ್ಟೆನು. ಅವನು ನನಗೆ ಭಯಪಟ್ಟು, ನನ್ನ ಹೆಸರನ್ನು ಘನಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:5
14 ತಿಳಿವುಗಳ ಹೋಲಿಕೆ  

ನಾನು ಸಮಾಧಾನದ ಒಡಂಬಡಿಕೆಯನ್ನು ಅವರ ಜೊತೆ ಮಾಡುವೆನು. ಇದು ನಿರಂತರದ ಒಡಂಬಡಿಕೆಯಾಗಿರುವದು. ನಾನು ಅವರ ಸ್ವದೇಶವನ್ನು ಹಿಂತಿರುಗಿಸಿ ಕೊಡುವೆನು. ಅವರನ್ನು ಅಭಿವೃದ್ಧಿಪಡಿಸಿ ಹೆಚ್ಚಿಸುವೆನು ಮತ್ತು ಅವರ ಮಧ್ಯೆ ನನ್ನ ಪವಿತ್ರ ಸ್ಥಳವನ್ನು ಇರಿಸುವೆನು. ಇದು ನಿರಂತರವಾದ ಒಡಂಬಡಿಕೆ.


“ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.


“ನೀನು ಲೇವಿಯರನ್ನು ಶುದ್ಧೀಕರಿಸಿ ಅವರನ್ನು ವಿಶೇಷ ಕೊಡುಗೆಯಾಗಿ ನನಗೆ ಕೊಟ್ಟ ಮೇಲೆ, ಅವರು ಬಂದು ದೇವದರ್ಶನಗುಡಾರದ ಕೆಲಸವನ್ನು ಮಾಡಬಹುದು.


“ದೇವರಾದ ನಾನು ಈ ಆಜ್ಞೆಯನ್ನು ಕೊಡುತ್ತೇನೆ: ‘ಇಸ್ರೇಲಿನ ಇತರ ಕುಟುಂಬಗಳಿಂದ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವ ಬದಲು ಲೇವಿಯರನ್ನೇ ತೆಗೆದುಕೊ. ಇಸ್ರೇಲರ ಚೊಚ್ಚಲು ಪಶುಗಳನ್ನು ತೆಗೆದುಕೊಳ್ಳುವ ಬದಲು ಲೇವಿಯರ ಪಶುಗಳನ್ನೇ ತೆಗೆದುಕೊ. ಲೇವಿಯರು ನನ್ನ ಸ್ವತ್ತಾಗಿದ್ದಾರೆ.


ಕೂಡಲೇ ಯಾಜಕನಾಗಿದ್ದ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ತೆಗೆದುಕೊಂಡು


ಆ ಇಸ್ರೇಲನನ್ನು ಹಿಂಬಾಲಿಸಿ ಮಲಗುವ ಕೋಣೆಯೊಳಗೆ ಹೋಗಿ ಅವನನ್ನೂ ಆ ಮಿದ್ಯಾನ್ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರೇಲರಿಗುಂಟಾದ ವ್ಯಾಧಿ ನಿಂತುಹೋಯಿತು.


ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ.


ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯು ಆತನನ್ನು ಕಡೆಗಣಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು