ಮಲಾಕಿ 2:7 - ಪರಿಶುದ್ದ ಬೈಬಲ್7 ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು . ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.
ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.
“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.
ಅವರು ಸರ್ವಶಕ್ತನಾದ ಯೆಹೋವನ ಆಲಯದಲ್ಲಿದ್ದ ಯಾಜಕರ ಬಳಿಗೂ ಪ್ರವಾದಿಗಳ ಬಳಿಗೂ ಹೋದರು. ಅವರು ಹೀಗೆ ಪ್ರಶ್ನೆ ಕೇಳಿದರು: “ಅನೇಕ ವರ್ಷಗಳಿಂದ ಆಲಯವು ಕೆಡವಲ್ಪಟ್ಟದ್ದಕ್ಕಾಗಿ ನಮ್ಮ ದುಃಖವನ್ನು ತೋರಿಸಿದೆವು. ಪ್ರತೀ ವರ್ಷದ ಐದನೇ ತಿಂಗಳಿನಲ್ಲಿ ಉಪವಾಸಕ್ಕಾಗಿ ಮತ್ತು ರೋದಿಸುವುದಕ್ಕಾಗಿ ನಾವು ಪ್ರತ್ಯೇಕ ಸಮಯವನ್ನು ನೇಮಿಸುತ್ತಿದ್ದೆವು. ನಾವು ಇದನ್ನು ಹೀಗೆಯೇ ಮುಂದುವರಿಸಬೇಕೋ?”