ಮಲಾಕಿ 2:8 - ಪರಿಶುದ್ದ ಬೈಬಲ್8 “ಆದರೆ ಯಾಜಕರೇ, ನೀವು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿ ಬಿಟ್ಟಿರಿ. ಅನೇಕ ಜನರು ತಪ್ಪು ದಾರಿಯಲ್ಲಿ ಹೋಗುವಂತೆ ಮಾಡಲು ನೀವು ಉಪದೇಶವನ್ನು ಬಳಸಿಕೊಂಡಿರಿ. ಲೇವಿಯೊಂದಿಗೆ ಮಾಡಿದ ಒಡಂಬಡಿಕೆಯನ್ನು ನೀವು ಹಾಳುಮಾಡಿಬಿಟ್ಟಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವೋ ದಾರಿತಪ್ಪಿದ್ದೀರಿ; ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ, ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರನ್ನು ಎಡವುವಂತೆ ಮಾಡಿದ್ದೀರಿ. ಲೇವಿಯರೊಂದಿಗಿನ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.
ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.