Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:1 - ಪರಿಶುದ್ದ ಬೈಬಲ್‌

1 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:1
38 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.


“ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ. ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.


ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


ಅದಕ್ಕೆ ಪೌಲನು, “ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದನು. ಅಲ್ಲದೆ ತನ್ನ ತರುವಾಯ ಬರುವಾತನಲ್ಲಿ ನಂಬಿಕೆ ಇಡಬೇಕೆಂದು ಅವರಿಗೆ ಹೇಳಿದನು. ಆ ವ್ಯಕ್ತಿಯೇ ಯೇಸು” ಎಂದನು.


ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.


“ಇಗೋ, ನಿಮ್ಮ ಮುಂದೆ ನಾನು ಒಬ್ಬ ದೂತನನ್ನು ಕಳುಹಿಸುತ್ತಿದ್ದೇನೆ. ನಾನು ನಿಮಗಾಗಿ ಸಿದ್ಧಮಾಡಿದ ಸ್ಥಳಕ್ಕೆ ಈ ದೂತನು ನಿಮ್ಮನ್ನು ಮುನ್ನಡೆಸುವನು; ದಾರಿಯುದ್ದಕ್ಕೂ ಸಂರಕ್ಷಿಸುವನು.


ಯೇಸು ದೇವಾಲಯದಲ್ಲಿ ಪ್ರತಿದಿನ ಜನರಿಗೆ ಉಪದೇಶಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಜನರ ನಾಯಕರಲ್ಲಿ ಕೆಲವರು ಯೇಸುವನ್ನು ಕೊಲ್ಲಲು ಬಯಸಿದರು.


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.


ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು.


ಅವಳು ಅದೇ ಸಮಯದಲ್ಲಿ ಅಲ್ಲಿಗೆ ಬಂದು, ದೇವರಿಗೆ ಸ್ತೋತ್ರ ಸಲ್ಲಿಸಿ ದೇವರು ಜೆರುಸಲೇಮಿಗೆ ದಯಪಾಲಿಸುವ ಬಿಡುಗಡೆಯನ್ನು ಎದುರುನೋಡುತ್ತಿದ್ದ ಜನರಿಗೆ ಯೇಸುವಿನ ವಿಷಯವಾಗಿ ತಿಳಿಸಿದಳು.


ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು.


ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳು ಹೇಳಿದ್ದನ್ನು ನೀವು ನಂಬುವುದಾದರೆ ಈ ಯೋಹಾನನೇ ಎಲೀಯನು. ಅವನು ಬರುತ್ತಾನೆಂದು ಧರ್ಮಶಾಸ್ತ್ರವೂ ಹೇಳಿದೆ.


ದೇವರು ತನ್ನ ಈ ಸಂದೇಶವನ್ನು ಜನರಿಗೆ ತಲುಪಿಸುವಂತೆ ಹಗ್ಗಾಯನನ್ನು ಉಪಯೋಗಿಸಿದನು. ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮೊಂದಿಗಿದ್ದೇನೆ.”


ಆಗ ನೀವು ನಾನು ಈ ಆಜ್ಞೆಯನ್ನು ಯಾಕೆ ಕೊಡುತ್ತಿದ್ದೇನೆಂದು ಅರಿಯುವಿರಿ. ಲೇವಿಯರೊಂದಿಗೆ ನಾನು ಮಾಡಿರುವ ಒಡಂಬಡಿಕೆಯು ಮುಂದುವರಿಯುವ ಹಾಗೆ ನಾನು ಈ ಸಂಗತಿಗಳನ್ನು ನಿಮಗೆ ತಿಳಿಸುತ್ತಿದ್ದೇನೆ.” ಸೇನಾಧೀಶ್ವರನಾದ ಯೆಹೋವನು ಈ ಮಾತುಗಳನ್ನು ಅಂದಿದ್ದಾನೆ.


ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ.


ಇಗೋ, ನನ್ನ ಒಡೆಯನಾದ ಯೆಹೋವನು ಬಲಸಾಮರ್ಥ್ಯಗಳೊಡನೆ ಬರುತ್ತಿದ್ದಾನೆ. ಆತನು ತನ್ನ ಪರಾಕ್ರಮದಿಂದ ಎಲ್ಲಾ ಜನರನ್ನು ಆಳುವನು. ಆತನು ತನ್ನ ಜನರಿಗೆ ಪ್ರತಿಫಲಗಳನ್ನು ತರುವನು. ಅವರ ಸಂಬಳವು ಆತನ ಕೈಯಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು