ಮಲಾಕಿ 3:13 - ಪರಿಶುದ್ದ ಬೈಬಲ್13 ಯೆಹೋವನು ಹೀಗೆನ್ನುತ್ತಾನೆ, “ನೀವು ನನಗೆ ವಿರುದ್ಧವಾಗಿ ಹೇಯ ಮಾತುಗಳನ್ನಾಡಿದಿರಿ.” ಅದಕ್ಕೆ ನೀವು “ನಿನ್ನ ವಿರುದ್ಧವಾಗಿ ಏನು ಹೇಳಿದ್ದೇವೆ?” ಎಂದು ಕೇಳುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ನೀವು ನನಗೆ ಕಠಿಣವಾದ ಮಾತುಗಳನ್ನಾಡಿದ್ದೀರಿ,” ಎನ್ನುತ್ತಾರೆ ಸರ್ವೇಶ್ವರ. “ನೀವು, ‘ನಿನಗೆ ವಿರುದ್ಧವಾಗಿ ನಾವು ಮಾತನಾಡಿದ್ದೇನು?’ ಎಂದು ಕೇಳುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹು ಕಠಿನ ಎಂದು ಯೆಹೋವನು ಅನ್ನುತ್ತಾನೆ. ನಿನಗೆ ವಿರುದ್ಧವಾಗಿ ಏನು ಮಾತಾಡಿದ್ದೇವೆ ಅನ್ನುತ್ತೀರಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ನೀವು ನನಗೆ ವಿರೋಧವಾಗಿ ಅಹಂಕಾರದಿಂದ ಮಾತುಗಳನ್ನಾಡಿದಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೂ ನೀವು, ‘ನಿನಗೆ ವಿರೋಧವಾಗಿ ನಾವು ಏನು ಮಾತಾಡಿದ್ದೇವೆ?’ ಎನ್ನುತ್ತೀರಿ.” ಅಧ್ಯಾಯವನ್ನು ನೋಡಿ |
“ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.