14 ನೀವು, “ದೇವರಾದ ಯೆಹೋವನನ್ನು ಆರಾಧಿಸುವುದು ನಿಷ್ಪ್ರಯೋಜಕ. ಆತನ ಕಟ್ಟಳೆಗಳನ್ನು ನಾವು ಅನುಸರಿಸಿದೆವು. ಆದರೆ ಅದರಲ್ಲಿ ನಮಗೇನೂ ಲಾಭವಾಗಲಿಲ್ಲ. ಸಮಾಧಿಯಲ್ಲಿ ಜನರು ರೋದಿಸುವ ಹಾಗೆ ನಮ್ಮ ಪಾಪಗಳಿಗಾಗಿ ನಾವು ರೋದಿಸಿದೆವು. ಆದರೆ ಅದರಿಂದ ನಮಗೇನೂ ಸಹಾಯವಾಗಲಿಲ್ಲ.
14 ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?
ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.
“ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.
ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.
ಆದರೆ ಯೆಹೂದದ ಜನರು, ‘ಪ್ರಯತ್ನ ಮಾಡುವದರಿಂದ ಏನೂ ಪ್ರಯೋಜನವಿಲ್ಲ. ನಮ್ಮ ಮನಸ್ಸಿಗೆ ಬಂದಂತೆ ನಾವು ಮಾಡುತ್ತಿದ್ದೇವೆ. ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ದುಷ್ಟ ಮತ್ತು ಮೊಂಡುಮನಸ್ಸು ಹೇಳಿದಂತೆ ನಡೆಯುವೆವು’ ಎಂಬುದಾಗಿ ಉತ್ತರಿಸುವರು” ಎಂದನು.
ಅವರು ದೇವರಲ್ಲದ್ದಕ್ಕೆ ತಿರುಗಿಕೊಂಡರು. ಮೋಸದ ಬಿಲ್ಲಿನಂತೆ ಅವರಾದರು. ಅವರ ನಾಯಕರು ತಮ್ಮ ಶಕ್ತಿಯ ಬಗ್ಗೆ ಹೆಚ್ಚಳಪಟ್ಟರು. ಆದರೆ ಅವರು ಕತ್ತಿಯಲ್ಲಿ ಸಾಯುವರು. ಆಗ ಈಜಿಪ್ಟಿನ ಜನರು ಅವರನ್ನು ನೋಡಿ ನಗಾಡುವರು.
ಆಮೇಲೆ ನಾವು ಸ್ವರ್ಗದ ರಾಣಿಗೆ ನೈವೇದ್ಯ ಅರ್ಪಿಸುವದನ್ನು ಮತ್ತು ಪಾನನೈವೇದ್ಯವನ್ನು ನಿಲ್ಲಿಸಿದೆವು. ಅವಳನ್ನು ಪೂಜಿಸದೆ ಹಾಗೆಲ್ಲ ಮಾಡುವದನ್ನು ನಿಲ್ಲಿಸಿದಂದಿನಿಂದ ನಮಗೆ ಸಮಸ್ಯೆಗಳುಂಟಾದವು. ನಮ್ಮ ಜನರು ಖಡ್ಗ ಮತ್ತು ಹಸಿವುಗಳಿಗೆ ಬಲಿಯಾದರು.”