ಮಲಾಕಿ 3:16 - ಪರಿಶುದ್ದ ಬೈಬಲ್16 ದೇವರನ್ನು ಅನುಸರಿಸುವ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು ಯೆಹೋವನು ಆಲೈಸಿದನು. ಆತನ ಮುಂದೆ ದೇವಜನರ ಹೆಸರುಗಳನ್ನು ಬರೆದಿರುವ ಒಂದು ಪುಸ್ತಕವಿತ್ತು. ಯೆಹೋವನ ಹೆಸರನ್ನು ಘನಪಡಿಸುವವರ ಹೆಸರುಗಳು ಅದರಲ್ಲಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.
“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”