ಮಲಾಕಿ 3:18 - ಪರಿಶುದ್ದ ಬೈಬಲ್18 ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ. ಅಧ್ಯಾಯವನ್ನು ನೋಡಿ |
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.
ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.