2 “ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು.
2 ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ.
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ಆದ್ದರಿಂದ ಎಲ್ಲಾ ಸಮಯದಲ್ಲಿಯೂ ಸಿದ್ಧರಾಗಿರಿ. ನಡೆಯಲಿರುವ ಈ ಎಲ್ಲಾ ಸಂಗತಿಗಳನ್ನು ಎದುರಿಸಿ ಸುರಕ್ಷಿತವಾಗಿ ಮುಂದುವರಿಯಲು ಮತ್ತು ಮನುಷ್ಯಕುಮಾರನ ಮುಂದೆ ನಿಲ್ಲಲು ಬೇಕಾದ ಶಕ್ತಿಗಾಗಿ ಪ್ರಾರ್ಥಿಸಿರಿ.”
ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.
ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?
ಆದರೆ ನೀವು ಆತನನ್ನು ನಿಜವಾಗಿಯೂ ತಿಳಿದಿಲ್ಲ. ನಾನು ಆತನನ್ನು ಬಲ್ಲೆನು. ನಾನು ಆತನನ್ನು ತಿಳಿದಿಲ್ಲವೆಂದು ಹೇಳಿದರೆ ನಿಮ್ಮಂತೆ ನಾನು ಸಹ ಸುಳ್ಳುಗಾರನಾಗುತ್ತೇನೆ. ನಾನು ಆತನನ್ನು ಬಲ್ಲೆನು. ನಾನು ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.
ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.
ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.
“ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು.
ನಯವಾದ ನಾರುಮಡಿಯನ್ನು ವಧುವಿಗೆ ಧರಿಸಲು ನೀಡಲಾಗಿತ್ತು. ಆ ನಾರುಮಡಿಯು ಪ್ರಕಾಶಮಾನವಾಗಿತ್ತು ಹಾಗೂ ಶುಭ್ರವಾಗಿತ್ತು.” (ನಯವಾದ ನಾರುಮಡಿಯೆಂದರೆ ದೇವರ ಪರಿಶುದ್ಧ ಜನರು ಮಾಡಿದ ಒಳ್ಳೆಯ ಕಾರ್ಯಗಳು ಎಂದರ್ಥ.)
“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.
ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಈ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.
ಜ್ಞಾನಿಗಳಾದ ಕೆಲವು ಯೆಹೂದ್ಯರು ತಪ್ಪುಗಳನ್ನು ಮಾಡಿ ಬಿದ್ದುಹೋಗುವರು. ಆದರೆ ಹಿಂಸೆ ನಡೆಯಬೇಕು. ಏಕೆಂದರೆ ಅಂತ್ಯಕಾಲ ಬರುವವರೆಗೆ ಅವರು ದೃಢಚಿತ್ತರೂ ಶುದ್ಧರೂ ನಿಷ್ಕಳಂಕರೂ ಆಗಬೇಕು. ಸರಿಯಾದ ಸಮಯಕ್ಕೆ ಅಂತ್ಯಕಾಲ ಬರುವದು.
ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. ಆತನ ಶಿಬಿರವು ದೊಡ್ಡದಾಗಿದೆ. ಆ ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; ಆ ಸೈನ್ಯವು ಮಹಾ ಬಲಿಷ್ಠವಾಗಿದೆ. ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.
ಅಬ್ರಹಾಮನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಕಡೆಗೂ ಕಣಿವೆ ಪ್ರದೇಶದ ಕಡೆಗೂ ನೋಡಿದಾಗ ಆ ಪ್ರದೇಶದಿಂದ ಹೊಗೆ ಮೇಲೇರುತ್ತಿರುವುದನ್ನು ಕಂಡನು; ಧಗಧಗಿಸುವ ಬೆಂಕಿಯಿಂದ ಬರುವ ಹೊಗೆಯಂತೆ ಅದು ಕಂಡಿತು.