ಮಲಾಕಿ 3:3 - ಪರಿಶುದ್ದ ಬೈಬಲ್3 ಆತನು ಲೇವಿಯರನ್ನು ಶುದ್ಧಮಾಡುವನು. ಅವರನ್ನು ಬೆಂಕಿಯಿಂದ ಪರಿಶುದ್ಧ ಮಾಡುವನು. ಶುದ್ಧ ಬೆಳ್ಳಿ ಚಿನ್ನದಂತೆ ಆತನು ಅವರನ್ನು ಶುದ್ಧಿಮಾಡುವನು. ಆಗ ಅವರು ಯೆಹೋವನಿಗೆ ಕಾಣಿಕೆಗಳನ್ನು ತರುವರು; ಸರಿಯಾದ ರೀತಿಯಲ್ಲಿ ಕಾಣಿಕೆಗಳನ್ನು ಅರ್ಪಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನುಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರು ಬೆಳ್ಳಿಯನ್ನು ಪರಿಶೋಧಿಸಿ ಶುದ್ಧೀಕರಿಸುವ ಅಕ್ಕಸಾಲಿಗನಂತೆ ಕುಳಿತುಕೊಂಡು ಲೇವಿಯರನ್ನು ಶುದ್ಧಮಾಡುವರು. ಬಂಗಾರದ ಹಾಗೆಯೂ, ಬೆಳ್ಳಿಯ ಹಾಗೆಯೂ ಶುದ್ಧಮಾಡುವರು. ಆಗ ಅವರು ಯೆಹೋವ ದೇವರಿಗೆ ನೀತಿಯ ಕಾಣಿಕೆಯನ್ನು ಅರ್ಪಿಸುವರು. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.