Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:6 - ಪರಿಶುದ್ದ ಬೈಬಲ್‌

6 “ನಾನು ದೇವರಾದ ಯೆಹೋವನು. ನಾನು ಬದಲಾಗದ ದೇವರು. ನೀವು ಯಾಕೋಬನ ಮಕ್ಕಳು. ನೀವು ಸಂಪೂರ್ಣವಾಗಿ ನಾಶ ಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಯಕೋಬನ ಕುಲಪುತ್ರರೇ, ನಾನು ಅದಲುಬದಲಾಗದ ಸರ್ವೇಶ್ವರ, ಈ ಕಾರಣದಿಂದ ನೀವು ಅಳಿಯದೆ ಉಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ; ಆದದರಿಂದ ಯಾಕೋಬ ಸಂತತಿಯವರೇ, ನೀವು ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಾನು ಯೆಹೋವ ದೇವರು. ನಾನು ಬದಲಾಗುವುದಿಲ್ಲ. ಆದ್ದರಿಂದ ನೀವು ಯಾಕೋಬಿನ ವಂಶಜರೇ, ನಾಶವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:6
36 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.


ಯೇಸು ಕ್ರಿಸ್ತನು ನಿನ್ನೆ ಇದ್ದಂತೆ ಇಂದಿಗೂ ಇದ್ದಾನೆ. ಸದಾಕಾಲ ಹಾಗೆಯೇ ಇರುವನು.


ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


“ಯೆರೆಮೀಯನೇ, ನಾನೇ ಯೆಹೋವನು, ನಾನು ಈ ಭೂಮಂಡಲದ ಪ್ರತಿಯೊಬ್ಬನ ದೇವರು. ಯೆರೆಮೀಯನೆ, ನನಗೆ ಯಾವುದೂ ಅಸಾಧ್ಯವಲ್ಲವೆಂಬುದನ್ನು ನೀನು ಬಲ್ಲೆ.”


ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಯೆಹೋವನು ಸರ್ವಕಾಲದಲ್ಲೂ ಇರುವನು. ಯೆಹೋವನು ಸುಳ್ಳಾಡುವುದಿಲ್ಲ; ಆತನು ಮನುಷ್ಯನಂತೆ ಪದೇಪದೇ ಮನಸ್ಸನ್ನು ಬದಲಾಯಿಸುವವನಲ್ಲ” ಎಂದು ಹೇಳಿದನು.


ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.


ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”


ನಾನೇ ಆದಿಯೂ ಅಂತ್ಯವೂ ಮೊದಲನೆಯವನೂ ಕಡೆಯವನೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ.


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ಆದರೆ ಯೆಹೋವನು ತನ್ನ ಭಕ್ತರನ್ನು ಪ್ರೀತಿಸುತ್ತಲೇ ಬಂದನು. ಇನ್ನು ಮುಂದೆಯೂ ಪ್ರೀತಿಸುತ್ತಲೇ ಇರುವನು. ಆತನು ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಒಳ್ಳೆಯವನಾಗಿರುವನು.


ಲೋಕವೂ ಆಕಾಶವೂ ಕೊನೆಗೊಳುತ್ತವೆ. ನೀನಾದರೊ ಶಾಶ್ವತವಾಗಿರುವೆ! ಅವು ಬಟ್ಟೆಗಳಂತೆ ಹಳೆಯದಾಗುತ್ತವೆ. ನೀನು ಅವುಗಳನ್ನು ಉಡುಪುಗಳಂತೆ ಬದಲಾಯಿಸುವೆ. ಅವುಗಳೆಲ್ಲಾ ಬದಲಾಗುತ್ತವೆ.


ದೇವರು ನಿಮ್ಮಲ್ಲಿ ಒಳ್ಳೆಯ ಕಾರ್ಯವನ್ನು ಆರಂಭಿಸಿ ನಡೆಸಿಕೊಂಡು ಬರುತ್ತಿದ್ದಾನೆ. ಯೇಸು ಕ್ರಿಸ್ತನು ಮತ್ತೆ ಬಂದಾಗ ದೇವರು ಆ ಕಾರ್ಯವನ್ನು ಸಂಪೂರ್ಣಗೊಳಿಸುವನೆಂದು ನನಗೆ ಭರವಸೆ ಇದೆ.


ನಿನ್ನ ದೇವರಾದ ಯೆಹೋವನು ನಾನೇ. ನಾನು ನಿನ್ನ ಬಲಗೈಯನ್ನು ಹಿಡಿದಿದ್ದೇನೆ. ‘ನೀನು ಹೆದರಬೇಡ, ನಾನೇ ನಿನಗೆ ಸಹಾಯ ಮಾಡುತ್ತೇನೆ’ ಎಂದು ಹೇಳುತ್ತಿದ್ದೇನೆ.


ನನ್ನ ಭಯಂಕರವಾದ ಕೋಪವು ಮೇಲುಗೈ ಸಾಧಿಸುವದಿಲ್ಲ. ಎಫ್ರಾಯೀಮನನ್ನು ನಾನು ತಿರುಗಿ ನಾಶಮಾಡುವದಿಲ್ಲ. ನಾನು ದೇವರು, ನರಮನುಷ್ಯನಲ್ಲ. ನಾನು ಪವಿತ್ರನು, ನಿನ್ನೊಂದಿಗಿರುವೆನು. ನನ್ನ ಕೋಪವನ್ನು ಪ್ರದರ್ಶಿಸೆನು.


ಇಸ್ರೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು. ತಿರುಗುಬಾಣದಂತೆ ತಮ್ಮ ದಿಕ್ಕನ್ನು ಬದಲಾಯಿಸಿಕೊಂಡರು.


ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.


ಆತನು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೀಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ಈ ದೇಶವನ್ನು ಕೊಡಬೇಕೆಂತಲೂ ನೀನು ಈ ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು.


ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ.


“ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ವಧಿಸಲು ಸಿದ್ಧನಾಗಿದ್ದೆ. ಆದ್ದರಿಂದ ನಾನು ನಿನಗೆ ಈ ವಾಗ್ದಾನವನ್ನು ಮಾಡುತ್ತೇನೆ:


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ದೇವರೇ, ನೀನಾದರೋ ಎಂದಿಗೂ ಬದಲಾಗುವುದಿಲ್ಲ. ನೀನು ಎಂದೆಂದಿಗೂ ಜೀವಿಸುವೆ!


ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ.


ಆಗ ಹಬಕ್ಕೂಕನು ಹೇಳಿದ್ದೇನೆಂದರೆ, ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ.


ನಾವು ನಿನ್ನ ಸೇವಕರಾಗಿದ್ದೇವೆ. ಇಲ್ಲಿ ನಮ್ಮ ಮಕ್ಕಳು ವಾಸವಾಗಿರುತ್ತಾರೆ; ಅವರ ಸಂತತಿಗಳವರೂ ನಿನ್ನನ್ನು ಆರಾಧಿಸಲು ಇಲ್ಲಿರುತ್ತಾರೆ.”


ನೀವು ಹುಟ್ಟಿದಾಗ ನಾನು ನಿಮ್ಮನ್ನು ಹೊತ್ತುಕೊಂಡೆನು. ನೀವು ಮುದುಕರಾಗುವಾಗಲೂ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು. ನಿಮ್ಮ ತಲೆಕೂದಲು ನರೆತಾಗಲೂ ನಾನು ನಿಮ್ಮನ್ನು ಹೊರುವೆನು; ಯಾಕೆಂದರೆ ನಾನು ನಿಮ್ಮನ್ನು ಸೃಷ್ಟಿಸಿದೆನು. ಆದ್ದರಿಂದ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು, ನಿಮ್ಮನ್ನು ರಕ್ಷಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು