Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:8 - ಪರಿಶುದ್ದ ಬೈಬಲ್‌

8 ದೇವರಿಂದ ಕದ್ದುಕೊಳ್ಳುವದನ್ನು ನಿಲ್ಲಿಸಿರಿ. ಮನುಷ್ಯನು ದೇವರಿಂದ ಕದ್ದುಕೊಳ್ಳಬಾರದು. ಆದರೆ ನೀವು ನನ್ನಿಂದ ಕದ್ದುಕೊಂಡಿದ್ದೀರಿ. “ನಿನ್ನಿಂದ ಏನು ಕದ್ದುಕೊಂಡಿದ್ದೇವೆ” ಎಂದು ಕೇಳುತ್ತೀರಾ? “ನಿಮ್ಮ ದಶಮ ಭಾಗವನ್ನು ನೀವು ನನಗೆ ಅರ್ಪಿಸಬೇಕಿತ್ತು. ವಿಶೇಷ ಕಾಣಿಕೆಗಳನ್ನು ನೀವು ನನಗೆ ಕೊಡಬೇಕಾಗಿತ್ತು. ಆದರೆ ನೀವು ಹಾಗೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನರಮಾನವನು ದೇವರಿಗೆ ಮೋಸಮಾಡಬಹುದೋ? ಆದರೂ ನೀವು ನನಗೆ ಮೋಸಮಾಡುತ್ತಿದ್ದೀರಿ. ‘ನಿಮಗೆ ಹೇಗೆ ಮೋಸಮಾಡುತ್ತಿದ್ದೇವೆ?’ ಎಂದು ಕೇಳುತ್ತೀರೋ? ನೀವು ತೆರೆಬೇಕಾದ ದಶಮಾಂಶದಲ್ಲೂ, ಕೊಡಬೇಕಾದ ಕಾಣಿಕೆಯಲ್ಲೂ ಮೋಸಮಾಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ನಿನ್ನಿಂದ ಏನು ಕದ್ದುಕೊಂಡಿದ್ದೇವೆ ಎಂದು ಕೇಳುತ್ತೀರೋ? ದಶಮಾಂಶ, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಮನುಷ್ಯನು ದೇವರಿಂದ ಕದ್ದುಕೊಳ್ಳಲು ಸಾಧ್ಯವೇ? ಆದರೂ ನೀವು ನನ್ನಿಂದ ಕಳ್ಳತನ ಮಾಡಿದ್ದೀರಿ. “ಆದರೆ ನೀವು, ‘ಯಾವುದರಲ್ಲಿ ನಿನ್ನದನ್ನು ಕಳ್ಳತನ ಮಾಡಿದ್ದೇವೆ?’ ಎಂದು ಕೇಳುತ್ತೀರಿ. “ದಶಮಭಾಗ ಮತ್ತು ಅರ್ಪಣೆಗಳಲ್ಲಿಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:8
18 ತಿಳಿವುಗಳ ಹೋಲಿಕೆ  

ಜನರು, “ಅದು ಸೀಸರನ ಮುಖಚಿತ್ರ ಮತ್ತು ಹೆಸರು” ಎಂದು ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಅಂದನು.


ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿ. ದೇವರದನ್ನು ದೇವರಿಗೆ ಕೊಡಿ” ಎಂದು ಹೇಳಿದನು. ಯೇಸು ಹೇಳಿದ್ದನ್ನು ಕೇಳಿ ಅವರು ಅತ್ಯಾಶ್ಚರ್ಯಪಟ್ಟರು.


ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ. ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.


ಜನರು ವ್ಯಭಿಚಾರವೆಂಬ ಪಾಪವನ್ನು ಮಾಡಕೂಡದೆಂದು ನೀನು ಹೇಳುವೆ, ಆದರೆ ನೀನೇ ಆ ಪಾಪಮಾಡಿ ಅಪರಾಧಿಯಾಗಿರುವೆ. ನೀನು ವಿಗ್ರಹಗಳನ್ನು ದ್ವೇಷಿಸುವೆ, ಆದರೆ ನೀನೇ ಅವುಗಳನ್ನು ಗುಡಿಗಳಿಂದ ಕದಿಯುವೆ.


ನೀವು ಯಾರ್ಯಾರಿಗೆ ಏನೇನು ಕೊಡಬೇಕೋ ಅದನ್ನೆಲ್ಲಾ ಅವರಿಗೆ ಕೊಡಿರಿ. ಯಾವ ತೆರಿಗೆಯನ್ನಾದರೂ ಕೊಡಬೇಕಿದ್ದರೆ ಅದನ್ನು ಕೊಟ್ಟುಬಿಡಿರಿ. ಯಾರಿಗೆ ಗೌರವ ಕೊಡಬೇಕೋ ಅವರಿಗೆ ಗೌರವ ಕೊಡಿರಿ. ಯಾರಿಗೆ ಮರ್ಯಾದೆ ತೋರಿಸಬೇಕೊ ಅವರಿಗೆ ಮರ್ಯಾದೆಯನ್ನು ತೋರಿಸಿರಿ.


ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದನು.


ನೀವು ಆ ಮೇಜಿನಿಂದ ಆಹಾರವನ್ನು ತೆಗೆದುಕೊಳ್ಳುವದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಆ ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವದಿಲ್ಲ.


ಇಸ್ರೇಲರು ಪಾಪಮಾಡಿದ್ದಾರೆ. ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ. ನಾನು ನಾಶಪಡಿಸಲು ಹೇಳಿದ ವಸ್ತುಗಳಲ್ಲಿ ಕೆಲವನ್ನು ಅವರು ತೆಗೆದುಕೊಂಡಿದ್ದಾರೆ; ಅವರು ನನ್ನಿಂದ ಕದ್ದಿದ್ದಾರೆ; ಸುಳ್ಳು ಹೇಳಿದ್ದಾರೆ. ಅವರು ಆ ವಸ್ತುಗಳನ್ನು ತಮಗಾಗಿ ತೆಗೆದುಕೊಂಡಿದ್ದಾರೆ.


ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸುವನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.


ಆಗ ದೇವದೂತನು ನನಗೆ ಹೇಳಿದ್ದೇನೆಂದರೆ, “ಈ ಸುರುಳಿಯಲ್ಲಿ ಶಾಪವು ಬರೆಯಲ್ಪಟ್ಟಿದೆ. ಸುರುಳಿಯ ಒಂದು ಬದಿಯಲ್ಲಿ ಕದಿಯುವ ಜನರಿಗೆ ಶಾಪ ಬರೆಯಲ್ಪಟ್ಟಿದೆ. ಅದರ ಇನ್ನೊಂದು ಬದಿಯಲ್ಲಿ ವಾಗ್ದಾನ ಮಾಡಿಯೂ ಅದನ್ನು ಪಾಲಿಸದೆ ಸುಳ್ಳಾಡುವವರಿಗೆ ಶಾಪ ಬರೆಯಲ್ಪಟ್ಟಿದೆ.


ಬಳಿಕ ಐದನೆಯ ವರ್ಷದಲ್ಲಿ, ನೀವು ಆ ಮರದ ಹಣ್ಣುಗಳನ್ನು ತಿನ್ನಬಹುದು ಮತ್ತು ಮರವು ನಿಮಗೆ ಹೆಚ್ಚೆಚ್ಚಾಗಿ ಹಣ್ಣುಗಳನ್ನು ನೀಡುವುದು. ನಾನೇ ನಿಮ್ಮ ದೇವರಾದ ಯೆಹೋವನು!


ಉಚಿತವಾಗಿ ಕೊಡುವವನು ಅದಕ್ಕಿಂತಲೂ ಹೆಚ್ಚುಗಳಿಸುವನು. ಆದರೆ ಕೊಡಲೊಲ್ಲದವನು ಬಡವನಾಗುವನು.


ನಿನ್ನ ಕುರಿಗಳನ್ನು ನನ್ನ ಬಳಿಗೆ ಯಜ್ಞಮಾಡುವದಕ್ಕಾಗಿ ತರಲಿಲ್ಲ. ನೀನು ನನ್ನನ್ನು ಸನ್ಮಾನಿಸಲಿಲ್ಲ. ನೀನು ನನಗೆ ಬಲಿಯರ್ಪಣೆ ಮಾಡಲಿಲ್ಲ. ನೀನು ಬಲಿಯರ್ಪಣೆ ಮಾಡಬೇಕೆಂದು ನಾನು ನಿನ್ನನ್ನು ಬಲವಂತಪಡಿಸಲಿಲ್ಲ. ನೀನು ಆಯಾಸಗೊಳ್ಳುವ ತನಕ ಧೂಪಹಾಕಬೇಕೆಂದು ನಾನು ನಿನ್ನನ್ನು ಒತ್ತಾಯಪಡಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು