ಮಲಾಕಿ 4:4 - ಪರಿಶುದ್ದ ಬೈಬಲ್4 “ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ, ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲರಿಗಾಗಿ ಮೋಶೆಗೆ ನೇಮಿಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನಾನು ನನ್ನ ದಾಸನಾದ ಮೋಶೆಗೆ ಬೋಧಿಸಿದ ಧರ್ಮಶಾಸ್ತ್ರವನ್ನು ಜ್ಞಾಪಕಕ್ಕೆ ತಂದುಕೊಳ್ಳಿ. ಆ ವಿಧಿನಿಯಮಗಳನ್ನು ಆತನಿಗೆ ಹೋರೇಬ್ ಬೆಟ್ಟದಲ್ಲಿ ಕೊಟ್ಟದ್ದು ಇಸ್ರಯೇಲರು ಅವುಗಳನ್ನು ಅನುಸರಿಸಲೆಂದೇ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲ್ಯರಿಗೋಸ್ಕರ ಮೋಶೆಗೆ ನೇವಿುಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ನನ್ನ ಸೇವಕನಾದ ಮೋಶೆಯ ನಿಯಮವನ್ನು ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ವಿಧಿ ನಿಯಮಗಳನ್ನೂ ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |