6 ತಂದೆತಾಯಿಗಳು ಮಕ್ಕಳಿಗೂ ಮಕ್ಕಳು ತಂದೆತಾಯಿಗಳಿಗೂ ನಿಕಟ ಸಂಬಂಧಿಗಳಾಗುವಂತೆ ಅವನು ಮಾಡುವನು. ಇದು ನೆರವೇರಲೇಬೇಕು, ಇಲ್ಲದಿದ್ದಲ್ಲಿ ನಾನು ಬಂದು ನಿಮ್ಮ ದೇಶವನ್ನು ಸಂಪೂರ್ಣವಾಗಿ ನಾಶಮಾಡುವೆನು.”
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.
ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.
ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.
ಯೆಹೋವನು ತಾನು ಕರುಣೆ ತೋರುವ ಸಮಯದ ಕುರಿತಾಗಿ ಸಾರುವಂತೆ ನನ್ನನ್ನು ಕಳುಹಿಸಿದನು. ದುಷ್ಟರನ್ನು ಶಿಕ್ಷಿಸುವ ಸಮಯವನ್ನು ಸಾರಲು ದೇವರು ನನ್ನನ್ನು ಕಳುಹಿಸಿದನು. ದುಃಖಪಡುವ ಜನರನ್ನು ಸಂತೈಸಲು ದೇವರು ನನ್ನನ್ನು ಕಳುಹಿಸಿದನು.
ಆದರೆ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧ ಮಾಡಿದ ಜನಾಂಗಗಳನ್ನೆಲ್ಲಾ ಯೆಹೋವನು ಶಿಕ್ಷಿಸುವನು. ಅವರಿಗೆ ಭಯಂಕರ ರೋಗವನ್ನು ಬರಮಾಡುವನು. ಅವರು ಜೀವಂತರಾಗಿರುವಾಗಲೇ ಅವರ ಚರ್ಮವು ಕೊಳೆತುಹೋಗುವದು. ಅವರ ಕಣ್ಣುಗಳು ಅವು ಇರುವಲ್ಲಿಯೇ ಕೊಳೆತುಹೋಗುವವು. ಅವರ ಬಾಯೊಳಗೆ ಅವರ ನಾಲಿಗೆಗಳು ಕೊಳೆತುಹೋಗುವವು.
ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಮಾಡಲು ನಾನು ಎಲ್ಲಾ ಜನಾಂಗಗಳನ್ನು ಒಟ್ಟಿಗೆ ಸೇರಿಸುವೆನು. ಅವರು ಪಟ್ಟಣವನ್ನು ವಶಪಡಿಸಿಕೊಂಡು ಕಟ್ಟಡಗಳನ್ನೆಲ್ಲಾ ಧ್ವಂಸಮಾಡುವರು. ಹೆಂಗಸರನ್ನು ಬಲಾತ್ಕಾರದಿಂದ ಸಂಭೋಗಿಸುವರು. ಜನಸಂಖ್ಯೆಯ ಅರ್ಧದಷ್ಟು ಜನರು ಸೆರೆಹಿಡಿಯಲ್ಪಡುವರು. ಉಳಿದವರನ್ನು ಪಟ್ಟಣದಿಂದ ಕೊಂಡೊಯ್ಯುವುದಿಲ್ಲ.
ಆಗ ದೇವದೂತನು ನನಗೆ ಹೇಳಿದ್ದೇನೆಂದರೆ, “ಈ ಸುರುಳಿಯಲ್ಲಿ ಶಾಪವು ಬರೆಯಲ್ಪಟ್ಟಿದೆ. ಸುರುಳಿಯ ಒಂದು ಬದಿಯಲ್ಲಿ ಕದಿಯುವ ಜನರಿಗೆ ಶಾಪ ಬರೆಯಲ್ಪಟ್ಟಿದೆ. ಅದರ ಇನ್ನೊಂದು ಬದಿಯಲ್ಲಿ ವಾಗ್ದಾನ ಮಾಡಿಯೂ ಅದನ್ನು ಪಾಲಿಸದೆ ಸುಳ್ಳಾಡುವವರಿಗೆ ಶಾಪ ಬರೆಯಲ್ಪಟ್ಟಿದೆ.
ಈ ದೇಶದಲ್ಲಿ ವಾಸಿಸುವ ಜನರ ಬಗ್ಗೆ ನಾನು ದುಃಖಿಸುವುದಿಲ್ಲ.” ಇದು ಯೆಹೋವನ ನುಡಿ. “ನೋಡಿರಿ, ಪ್ರತಿಯೊಬ್ಬನೂ ತನ್ನ ಅರಸನಿಂದಲೂ ನೆರೆಯವರಿಂದಲೂ ಹಾಳುಮಾಡಲ್ಪಡುವಂತೆ ನಾನು ಮಾಡುವೆನು. ಅವರ ದೇಶವನ್ನು ಹಾಳುಮಾಡುವಂತೆ ಅವರನ್ನು ಬಿಡುವೆನು. ಅವರನ್ನು ನಿಲ್ಲಿಸುವುದಿಲ್ಲ.”