ಮಾರ್ಕ 1:13 - ಪರಿಶುದ್ದ ಬೈಬಲ್13 ಯೇಸು ಅಲ್ಲಿ ನಲವತ್ತು ದಿನಗಳ ಕಾಲ ಕಾಡುಮೃಗಗಳೊಂದಿಗಿದ್ದು ಸೈತಾನನಿಂದ ಪರಿಶೋಧಿಸಲ್ಪಟ್ಟನು. ಬಳಿಕ ದೇವದೂತರು ಬಂದು ಯೇಸುವಿಗೆ ಉಪಚಾರ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ವನ್ಯಮೃಗಗಳಿದ್ದ ಆ ಕಾಡಿನಲ್ಲಿ ಯೇಸು ನಾಲ್ವತ್ತು ದಿನಗಳನ್ನು ಕಳೆದರು. ಆ ಅವಧಿಯಲ್ಲಿ ಸೈತಾನನು ಅವರನ್ನು ಪರಿಶೋಧಿಸಲು ಪ್ರಯತ್ನಿಸಿದನು. ದೇವದೂತರು ಅವರನ್ನು ಉಪಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆತನು ನಾಲ್ವತ್ತು ದಿವಸ ಅಡವಿಯಲ್ಲಿ ಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಡುವವನಾದನು; ಮತ್ತು ದೇವದೂತರು ಆತನಿಗೆ ಉಪಚಾರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೇಸು ಅಲ್ಲಿ ನಲವತ್ತು ದಿನಗಳು, ಸೈತಾನನಿಂದ ಶೋಧನೆಗೆ ಒಳಗಾದರು. ಕಾಡುಮೃಗಗಳೊಡನೆ ಅರಣ್ಯದಲ್ಲಿ ಇದ್ದು, ದೇವದೂತರಿಂದ ಉಪಚಾರ ಪಡೆದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಜೆಜು ಚಾಳಿಸ್ ದಿಸಾ, ತ್ಯಾ ಮರುಭುಮಿತ್ ಜಿವಾಕ್ ಅಪಾಯ್ ಕರ್‍ತಲ್ಯಾ ಜನಾವರಾಂಚ್ಯಾ ಮದ್ದಿ ರ್‍ಹಾಲೊ, ಥೈ ಸೈತಾನ್ ಜೆಜುಕ್ ಪಾಪ್ ಕರಿ ಸರ್ಕೆ ಕರುಕ್ ಕಸ್ರತ್ ಕರ್‍ತಾ. ಖರೆ, ಸೈತಾನಾಕ್ ಜೆಜುನ್ ಪಾಪ್ ಕರಿ ಸರ್ಕೆ ಕರುಕ್ ಹೊವುಕ್ನಾ. ಮಾನಾ ದೆವಾಚ್ಯಾದುತಾನಿ ಯೆವ್ನ್ ಜೆಜುಚಿ ಸೆವಾ ಚಾಕ್ರಿ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.