Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:18 - ಪರಿಶುದ್ದ ಬೈಬಲ್‌

18 ಆಗ ಅವರು ತಮ್ಮ ಬಲೆಗಳನ್ನು ಅಲ್ಲಿಯೇ ಬಿಟ್ಟು ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ತಮ್ಮ ಬಲೆಗಳನ್ನು ಬಿಟ್ಟು ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹೆ ಅಯ್ಕಲ್ಲ್ಯಾ ತನ್ನಾಚ್, ಸಿಮಾವ್ ಅನಿ ಅಂದ್ರು, ಅಪ್ನಾಚಿ ಜಾಳಿ ಥೈಚ್ ಸೊಡುನ್ ಜೆಜುಚ್ಯಾ ವಾಂಗ್ಡಾ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:18
9 ತಿಳಿವುಗಳ ಹೋಲಿಕೆ  

“ಅದೇರೀತಿಯಲ್ಲಿ ನೀವೆಲ್ಲರೂ ಮೊದಲು ಯೋಜನೆ ಮಾಡಬೇಕು. ನೀವು ನನ್ನನ್ನು ಹಿಂಬಾಲಿಸಬೇಕೆಂದಿದ್ದರೆ ನಿಮ್ಮಲ್ಲಿರುವ ಪ್ರತಿಯೊಂದನ್ನೂ ತ್ಯಜಿಸಿಬಿಡಬೇಕು. ಇಲ್ಲವಾದರೆ, ನನ್ನ ಶಿಷ್ಯರಾಗಲು ಸಾಧ್ಯವಿಲ್ಲ!


ಅವರು ತಮ್ಮ ದೋಣಿಗಳನ್ನು ದಡಕ್ಕೆ ಸಾಗಿಸಿದ ಮೇಲೆ ಎಲ್ಲವನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.


ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೋ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ.


ಕೂಡಲೇ ಸೀಮೋನ ಮತ್ತು ಅಂದ್ರೆಯ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.


ಯೇಸು, “ಬನ್ನಿರಿ, ನನ್ನನ್ನು ಹಿಂಬಾಲಿಸಿರಿ, ನಾನು ನಿಮ್ಮನ್ನು ಬೇರೆ ವಿಧದ ಬೆಸ್ತರನ್ನಾಗಿ ಮಾಡುವೆನು. ಇನ್ನು ಮೇಲೆ ನೀವು ಒಂದುಗೂಡಿಸುವುದು ಜನರನ್ನೇ, ಮೀನುಗಳನ್ನಲ್ಲ” ಎಂದು ಅವರಿಗೆ ಹೇಳಿದನು.


ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಇನ್ನೂ ತಿರುಗಾಡುತ್ತಲೇ ಇದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ಕಂಡನು. ಅವರು ಮೀನುಗಳನ್ನು ಹಿಡಿಯಲು ಬಲೆಯನ್ನು ಸಿದ್ಧಪಡಿಸುತ್ತಾ ತಮ್ಮ ದೋಣಿಯಲ್ಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು