Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:20 - ಪರಿಶುದ್ದ ಬೈಬಲ್‌

20 ಅವರ ತಂದೆಯಾದ ಜೆಬೆದಾಯನೂ ಅವನ ಕೆಲಸಗಾರರೂ ಸಹೋದರರೊಂದಿಗೆ ದೋಣಿಯಲ್ಲಿದ್ದರು. ಯೇಸು ಅವರನ್ನು ಕರೆದನು. ಕೂಡಲೇ ಅವರು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರು ದೋಣಿಯಲ್ಲಿ ಕುಳಿತು ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಕೂಡಲೇ, ಯೇಸು ಅವರನ್ನು ಕರೆದರು. ಅವರೂ ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲೇ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇವರು ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಕೂಡಲೆ ಇವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕೂಡಲೇ ಯೇಸು ಅವರನ್ನು ಕರೆಯಲು, ಅವರು ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆಜು ತೆನಿ ಢೊನಾತ್ ಹೊತ್ತ್ಯಾಕ್ಡೆ ಗೆಲೊ ಅನಿ “ಮಾಜ್ಯಾ ಫಾಟ್ನಾ ಯೆವಾ” ಮನುನ್ ತೆಂಕಾ ಬಲ್ವುಲ್ಯಾನ್. ತನ್ನಾ ತೆನಿ ಅಪ್ನಾಚ್ಯಾ ಬಾಬಾಕ್ ಆಳಾಂಚ್ಯಾ ವಾಂಗ್ಡಾ ಥೈಚ್ ಸೊಡ್ಲ್ಯಾನಿ, ಅನಿ ಜೆಜುಚ್ಯಾ ವಾಂಗ್ಡಾ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:20
11 ತಿಳಿವುಗಳ ಹೋಲಿಕೆ  

“ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನಗಾಗಿ ಮತ್ತು ಸುವಾರ್ತೆಗಾಗಿ ತನ್ನ ಮನೆಯನ್ನಾಗಲಿ ಸಹೋದರರನ್ನಾಗಲಿ ಸಹೋದರಿಯರನ್ನಾಗಲಿ ತಾಯಿಯನ್ನಾಗಲಿ ತಂದೆಯನ್ನಾಗಲಿ ಮಕ್ಕಳನ್ನಾಗಲಿ ಭೂಮಿಯನ್ನಾಗಲಿ ತ್ಯಜಿಸಿದ ಪ್ರತಿಯೊಬ್ಬ ವ್ಯಕ್ತಿಯೂ


“ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.


ಹೀಗಿರಲಾಗಿ, ಲೋಕವು ಜನರ ವಿಷಯವಾಗಿ ಯೋಚಿಸುವಂತೆ ಇಂದಿನಿಂದ ನಾವು ಯಾರ ಬಗ್ಗೆಯೂ ಯೋಚಿಸುವುದಿಲ್ಲ. ಲೋಕವು ಯೋಚಿಸುವಂತೆ ಹಿಂದಿನ ಕಾಲದಲ್ಲಿ ನಾವು ಕ್ರಿಸ್ತನ ಬಗ್ಗೆ ಯೋಚಿಸಿಕೊಂಡಿದ್ದೆವು. ಆದರೆ ಈಗ ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ.


ಎಲೀಷನು ತಕ್ಷಣ ತನ್ನ ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಹೋದನು. ಎಲೀಷನು, “ನನ್ನ ತಾಯಿಗೆ ಮುದ್ದಿಟ್ಟು, ತಂದೆಗೆ ನಮಸ್ಕರಿಸಿ, ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು. ಎಲೀಯನು, “ಸರಿ, ನಾನು ನಿನ್ನನ್ನು ತಡೆಯುವುದಿಲ್ಲ” ಎಂದು ಉತ್ತರಿಸಿದನು.


ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆತಾಯಿಗಳನ್ನು ನಿರ್ಲಕ್ಷಿಸಿದರು; ಒಡಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ; ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂಬಡಿಕೆಯನ್ನು ಕಾಪಾಡಿದರು.


ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಇನ್ನೂ ತಿರುಗಾಡುತ್ತಲೇ ಇದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ಕಂಡನು. ಅವರು ಮೀನುಗಳನ್ನು ಹಿಡಿಯಲು ಬಲೆಯನ್ನು ಸಿದ್ಧಪಡಿಸುತ್ತಾ ತಮ್ಮ ದೋಣಿಯಲ್ಲಿದ್ದರು.


ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಸಬ್ಬತ್‌ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಮಾಡಿದನು.


ಅವರು ತಮ್ಮ ದೋಣಿಗಳನ್ನು ದಡಕ್ಕೆ ಸಾಗಿಸಿದ ಮೇಲೆ ಎಲ್ಲವನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು