ಮಾರ್ಕ 1:24 - ಪರಿಶುದ್ದ ಬೈಬಲ್24 “ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ದೆವ್ವವು - ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ಕೂಗಿ ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಅನಿ ಜೆಜುಕ್ ಬಗುನ್ “ನಜರೆತಾಚ್ಯಾ ಜೆಜು! ತಿಯಾ ಅಮ್ಚ್ಯಾ ಖಬ್ರೆಕ್ ಕಶ್ಯಾಕ್ ಯೆಲೆ? ಅಮ್ಕಾ ನಾಸ್ ಕರುಕ್ ಮನುನ್ ಯೆಲೆ ಕಾಯ್? ತಿಯಾ ಕೊನ್ ಮನುನ್ ಮಾಕಾ ಗೊತ್ತ್ ಹಾಯ್. ತಿಯಾ ದೆವಾಕ್ನಾ ಯೆಲ್ಲೊ ಎಕ್ಲೊ ಪವಿತ್ರ್” ಮನುನ್ ಬೊಬ್ ಮಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |
ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.