Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:25 - ಪರಿಶುದ್ದ ಬೈಬಲ್‌

25 ಯೇಸು, “ಸುಮ್ಮನಿರು! ಅವನೊಳಗಿಂದ ಹೊರಗೆ ಬಾ!” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದೆವ್ವವು ಆ ಮನುಷ್ಯನನ್ನು ಒದ್ದಾಡಿಸಿ, ಗಟ್ಟಿಯಾಗಿ ಚೀರುತ್ತಾ ಅವನನ್ನು ಬಿಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೇಸು ಅದನ್ನು ಗದರಿಸಿ - ಸುಮ್ಮನಿರು, ಇವನನ್ನು ಬಿಟ್ಟು ಹೋಗು ಎನ್ನಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಯೇಸು, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ಜೆಜುನ್ “ಗಪ್ ರ್‍ಹಾ! ಅನಿ ತ್ಯಾ ಮಾನ್ಸಾತ್ನಾ ಭಾಯ್ರ್ ಯೆ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:25
10 ತಿಳಿವುಗಳ ಹೋಲಿಕೆ  

ಯೇಸು ನಾನಾ ಬಗೆಯ ರೋಗಗಳಿಂದ ನರಳುತ್ತಿದ್ದ ಅನೇಕ ಜನರನ್ನು ಗುಣಪಡಿಸಿದನು; ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಬಿಡಿಸಿದನು. ಆದರೆ ಆ ದೆವ್ವಗಳಿಗೆ ಮಾತನಾಡಲು ಆತನು ಅವಕಾಶ ಕೊಡಲಿಲ್ಲ; ಏಕೆಂದರೆ ಯೇಸು ಯಾರೆಂಬುದು ದೆವ್ವಗಳಿಗೆ ಗೊತ್ತಿತ್ತು.


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಈ ಜನರು ಮಹೋನ್ನತನಾದ ದೇವರ ಸೇವಕರು! ನೀವು ಹೇಗೆ ರಕ್ಷಣೆ ಹೊಂದಬಹುದೆಂಬುದನ್ನು ಅವರು ಹೇಳುತ್ತಿದ್ದಾರೆ!” ಎಂದು ಕೂಗುತ್ತಿದ್ದಳು.


ಅನೇಕ ಜನರೊಳಗಿಂದ ದೆವ್ವಗಳು, “ನೀನು ದೇವಕುಮಾರ” ಎಂದು ಆರ್ಭಟಿಸುತ್ತಾ ಬಿಟ್ಟುಹೋದವು. ಆದರೆ ಯೇಸು ಆ ದೆವ್ವಗಳಿಗೆ, “ಮಾತಾಡಕೂಡದೆಂದು” ಬಲವಾಗಿ ಆಜ್ಞಾಪಿಸಿದನು. ಯೇಸುವೇ “ಕ್ರಿಸ್ತ”ನೆಂದು ದೆವ್ವಗಳಿಗೆ ತಿಳಿದಿತ್ತು.


ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ, “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.


ಆದರೆ ಯೇಸು ಆ ದೆವ್ವಕ್ಕೆ, “ಸುಮ್ಮನಿರು! ಇವನನ್ನು ಬಿಟ್ಟು ಹೊರಗೆ ಬಾ!” ಎಂದು ಆಜ್ಞಾಪಿಸಿದನು. ದೆವ್ವವು ಅವನನ್ನು ಜನರೆಲ್ಲರ ಎದುರಿನಲ್ಲಿಯೇ ಕೆಡವಿ ಯಾವ ಕೇಡೂ ಮಾಡದೆ ಬಿಟ್ಟು ಹೋಯಿತು.


ದೇವರು ದುಷ್ಟರಿಗೆ ಹೀಗೆನ್ನುವನು: “ನೀವು ನನ್ನ ಕಟ್ಟಳೆಗಳ ಕುರಿತು ಮಾತಾಡುವಿರಿ; ನನ್ನ ಒಡಂಬಡಿಕೆಯ ಕುರಿತು ಮಾತಾಡುವಿರಿ.


ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು.


“ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.


ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಅರಚುತ್ತಾ ಅವನೊಳಗಿಂದ ಹೊರಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು