ಮಾರ್ಕ 1:35 - ಪರಿಶುದ್ದ ಬೈಬಲ್35 ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ಹೊರಟು ಅಡವಿಯ ಸ್ಥಳಕ್ಕೆ ಹೋಗಿ ದೇವರನ್ನು ಪ್ರಾರ್ಥಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಬೆಳಗಾಗುವ ಮೊದಲೇ, ಇನ್ನೂ ಕತ್ತಲಿರುವಾಗ, ಯೇಸು ಎದ್ದು ಏಕಾಂತ ಸ್ಥಳಕ್ಕೆ ಹೊರಟುಹೋಗಿ, ಅಲ್ಲಿ ಪ್ರಾರ್ಥನೆ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಜೆಜು ದುಸ್ರೆಂದಿಸಿ ಸಕ್ಕಾಳ್‍ಫಿಡೆ ಉಟ್ಲೊ, ಅನಿ ಕೊನ್ಬಿನಸಲ್ಲ್ಯಾ ಶಾಂತ್ ಜಾಗ್ಯಾರ್ ಗೆಲೊ. ಅನಿ ಥೈ ಮಾಗ್ನಿ ಕರುಕ್ ಲಾಗಲ್ಲೊ. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.