Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:41 - ಪರಿಶುದ್ದ ಬೈಬಲ್‌

41 ಯೇಸು ಅವನಿಗಾಗಿ ದುಃಖಪಟ್ಟು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಇಷ್ಟವಿದೆ. ನಿನಗೆ ಗುಣವಾಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 “ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನನಗೆ ಮನಸ್ಸುಂಟು; ಶುದ್ಧವಾಗು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೇಸು ಕನಿಕರಪಟ್ಟು, ತಮ್ಮ ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಜೆಜುಕ್ ತೆಚೊ ಪಾಪ್‍ ದಿಸ್ಲೊ, ಜೆಜುನ್ ತೆಕಾ ಅಪ್ನಾಚ್ಯಾ ಹಾತಾನಿ ಅಪ್ಡುನ್ “ಮಾಕಾ ಮನ್ ಹಾಯ್. ತಿಯಾ ಪವಿತ್ರ್ ಹೊ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:41
12 ತಿಳಿವುಗಳ ಹೋಲಿಕೆ  

ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.


ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.


ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


ಯೇಸು ಅಲ್ಲಿಗೆ ಬಂದಾಗ, ಅನೇಕ ಜನರು ತನಗಾಗಿ ಕಾಯುತ್ತಿರುವುದನ್ನು ನೋಡಿದನು. ಅವರು ಕುರುಬನಿಲ್ಲದ ಕುರಿಗಳಂತೆ ಇರುವುದನ್ನು ಕಂಡು ದುಃಖಗೊಂಡು ಅವರಿಗೆ ಅನೇಕ ಸಂಗತಿಗಳನ್ನು ಉಪದೇಶಿಸಿದನು.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಯೇಸು ಆ ಬಾಲಕಿಯ ಕೈ ಹಿಡಿದು, ಅವಳಿಗೆ, “ತಲಿಥಾ ಕೂಮ್!” ಎಂದು ಹೇಳಿದನು. (ಅಂದರೆ “ಚಿಕ್ಕ ಹುಡುಗಿಯೇ, ಎದ್ದೇಳು ಎಂದು ನಾನು ಹೇಳುತ್ತಿದ್ದೇನೆ” ಎಂದರ್ಥ.)


ಯೇಸು ಎಚ್ಚೆತ್ತು ಬಿರುಗಾಳಿ ಮತ್ತು ಅಲೆಗಳಿಗೆ, “ಪ್ರಶಾಂತವಾಗಿರಿ! ಮೊರೆಯದಿರಿ!” ಎಂದು ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತುಹೋಯಿತು ಮತ್ತು ಸರೋವರವು ಪ್ರಶಾಂತವಾಯಿತು.


ಆಗ ದೇವರು, “ಬೆಳಕಾಗಲಿ” ಅನ್ನಲು ಬೆಳಕಾಯಿತು.


ಯಾಕೆಂದರೆ ಆತನು ನುಡಿದಾಗ ಭೂಲೋಕವು ಸೃಷ್ಟಿಯಾಯಿತು; ಆತನು ಆಜ್ಞಾಪಿಸಿದಾಗ ಸಮಸ್ತವು ಉಂಟಾಯಿತು.


ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ ಆತನಿಗೆ, “ನೀನು ಇಷ್ಟಪಟ್ಟರೆ, ನನ್ನನ್ನು ಗುಣಪಡಿಸಬಲ್ಲೆ” ಎಂದು ಬೇಡಿಕೊಂಡನು.


ಆ ಕೂಡಲೇ ಅವನಿಗೆ ಗುಣವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು