Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:11 - ಪರಿಶುದ್ದ ಬೈಬಲ್‌

11 ಅದಕ್ಕೆ ಯೇಸು, “ತನ್ನ ಹೆಂಡತಿಯನ್ನು ಬಿಟ್ಟು, ಬೇರೆ ಸ್ತ್ರೀಯನ್ನು ಮದುವೆಯಾಗುವವನು ತನ್ನ ಹೆಂಡತಿಗೆ ದ್ರೋಹಮಾಡಿ ವ್ಯಭಿಚಾರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಆತನು, “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಅವರು, “ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ಆಕೆಗೆ ದ್ರೋಹಬಗೆದು ವ್ಯಭಿಚಾರಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ದ್ರೋಹಿಯಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಯೇಸು ಅವರಿಗೆ, “ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಯಾದರೆ, ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಜೆಜುನ್ “ಅಪ್ನಾಚ್ಯಾ ಬಾಯ್ಕೊಕ್ ಸೊಡುನ್ ದುಸ್ರ್ಯಾ ಬಾಯ್ಕೊಮನ್ಸಿಕ್ಡೆ ಲಗಿನ್ ಹೊಲ್ಲೊ ಮಾನುಸ್ ಅಪ್ನಾಚ್ಯಾ ಬಾಯ್ಕೊಚ್ಯಾ ವಿರೊದ್ ವೆಭಿಚಾರ್ ಕರ್‍ತಾ,”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:11
9 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ. ಮೊದಲಿನ ಹೆಂಡತಿಯು ಬೇರೊಬ್ಬನೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವನು ಆಕೆಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆ ಆಗಬಹುದು” ಎಂದು ಉತ್ತರಿಸಿದನು.


ಆದರೆ ತನ್ನ ಗಂಡನು ಜೀವದಿಂದಿರುವಾಗಲೇ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುತ್ತಾಳೆಂದು ಧರ್ಮಶಾಸ್ತ್ರವು ಹೇಳುತ್ತದೆ. ಆದರೆ ಆಕೆಯ ಗಂಡನು ಸತ್ತುಹೋದರೆ ಆಕೆಯು ವಿವಾಹದ ಹಂಗಿನಿಂದ ಬಿಡುಗಡೆಯಾಗಿದ್ದಾಳೆ. ಹೀಗಿರಲಾಗಿ, ತನ್ನ ಗಂಡನು ತೀರಿಕೊಂಡ ಮೇಲೆ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುವುದಿಲ್ಲ.


“ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”


ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಆಕೆಯ ಗಂಡನಿಗೆ ಆಕೆಯ ದೇಹದ ಮೇಲೆ ಅಧಿಕಾರವಿದೆ. ಅದೇರೀತಿ, ಗಂಡನಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಅವನ ಹೆಂಡತಿಗೆ ಅವನ ದೇಹದ ಮೇಲೆ ಅಧಿಕಾರವಿದೆ.


ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.


ಶಿಷ್ಯರು ಮತ್ತು ಯೇಸು ಒಂದು ಮನೆಯಲ್ಲಿದ್ದಾಗ, ವಿವಾಹವಿಚ್ಛೇದನ ಪ್ರಶ್ನೆಯ ಬಗ್ಗೆ ಶಿಷ್ಯರು ಯೇಸುವನ್ನು ಮತ್ತೆ ಕೇಳಿದರು.


ಅವನ ಮನೆಯಿಂದ ಅವಳು ಹೊರಗೆ ಕಳುಹಿಸಲ್ಪಟ್ಟ ಮೇಲೆ ಆಕೆ ಬೇರೊಬ್ಬನನ್ನು ಮದುವೆಯಾಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು