Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:19 - ಪರಿಶುದ್ದ ಬೈಬಲ್‌

19 ನೀನು ನಿತ್ಯಜೀವ ಹೊಂದಬೇಕಾದರೆ ನಿನಗೆ ತಿಳಿದೇ ಇರುವ ಈ ಆಜ್ಞೆಗಳನ್ನು ಪಾಲಿಸು: ‘ಕೊಲೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳು ಹೇಳಬೇಡ, ಮೋಸ ಮಾಡಬೇಡ, ಅಲ್ಲದೆ ನಿನ್ನ ತಂದೆತಾಯಿಯರನ್ನು ಸನ್ಮಾನಿಸು’” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸಮಾಡಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು,” ಎಂದು ಯೇಸು ಉತ್ತರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನರಹತ್ಯ ಮಾಡಬಾರದು; ವ್ಯಭಿಚಾರಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ಮೋಸಮಾಡಬಾರದು; ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ‘ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತುಕಾ ಖಾಯ್ದೆ ಗೊತ್ತ್ ಹಾತ್; ಜಿವಾನಿ ಮಾರುನಕೊ, ವೆಭಿಚಾರ್ ಕರುನಕೊ, ಚೊರುನಕೊ, ಅನಿ ಎಕ್ಲ್ಯಾವರ್ತಿ ಝುಟೆ ಅಪ್ವಾದ್ ಘಾಲುನಕೊ, ಮೊಸ್ ಕರುನಕೊ, ಅನಿ ತುಜ್ಯಾ ಬಾಯ್-ಬಾಬಾಕ್ ಮಾನ್‍ ದಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:19
16 ತಿಳಿವುಗಳ ಹೋಲಿಕೆ  

ಏಕೆಂದರೆ, “ವ್ಯಭಿಚಾರ ಮಾಡಕೂಡದು; ಕೊಲೆ ಮಾಡಕೂಡದು; ಕದಿಯಕೂಡದು; ಇತರರಿಗೆ ಸೇರಿದ ವಸ್ತುಗಳನ್ನು ಅಪೇಕ್ಷಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಈ ಆಜ್ಞೆಗಳನ್ನು ಮೊದಲುಗೊಂಡು ಉಳಿದೆಲ್ಲಾ ಆಜ್ಞೆಗಳು, “ನೀನು ನಿನ್ನನ್ನು ಪ್ರೀತಿಸುವಂತೆ ಇತರ ಜನರನ್ನೂ ಪ್ರೀತಿಸು” ಎಂಬ ಒಂದೇ ಆಜ್ಞೆಯಲ್ಲಿ ಅಡಕವಾಗಿದೆ.


“ವ್ಯಭಿಚಾರ ಮಾಡಬಾರದು” ಎಂದು ದೇವರು ಹೇಳಿದನು. “ಕೊಲ್ಲಬಾರದು” ಎಂದೂ ಅದೇ ದೇವರು ಹೇಳಿದನು. ಹೀಗಿರಲಾಗಿ, ನೀವು ವ್ಯಭಿಚಾರವನ್ನು ಮಾಡದಿದ್ದರೂ ಯಾರನ್ನೇ ಆಗಲಿ ಕೊಂದರೆ, ದೇವರ ಇಡೀ ಧರ್ಮಶಾಸ್ತ್ರವನ್ನೇ ಉಲ್ಲಂಘಿಸಿದವರಾಗಿದ್ದೀರಿ.


ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ‘ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’” ಎಂದನು.


ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ.


“ನೀವು ನಿಮ್ಮನ್ನು ಪ್ರೀತಿಸುವಂತೆ ಇತರರನ್ನು ಪ್ರೀತಿಸಿರಿ” ಎಂಬ ಒಂದೇ ಒಂದು ಆಜ್ಞೆಯಲ್ಲಿ ಇಡೀ ಧರ್ಮಶಾಸ್ತ್ರವೇ ಅಡಕವಾಗಿದೆ.


ನಿಮ್ಮಲ್ಲಿ ಕೆಲವರು ಮೋಶೆಯ ಧರ್ಮಶಾಸ್ತ್ರಕ್ಕೆ ಇನ್ನೂ ಅಧೀನರಾಗಿರಲು ಇಷ್ಟಪಡುತ್ತೀರಿ. ಧರ್ಮಶಾಸ್ತ್ರವು ಏನು ಹೇಳುತ್ತದೆಂಬುದು ನಿಮಗೆ ಗೊತ್ತಿದೆಯೋ? ನನಗೆ ತಿಳಿಸಿ.


ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ಯೇಸು ಅದಕ್ಕೆ, “ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ಯಾವ ಮನುಷ್ಯನೂ ಒಳ್ಳೆಯವನಲ್ಲ. ದೇವರು ಮಾತ್ರ ಒಳ್ಳೆಯವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು