Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:20 - ಪರಿಶುದ್ದ ಬೈಬಲ್‌

20 ಅವನು, “ಉಪದೇಶಕನೇ, ನಾನು ಬಾಲ್ಯದಿಂದಲೂ ಈ ಆಜ್ಞೆಗಳಿಗೆಲ್ಲಾ ವಿಧೇಯನಾಗಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಆತನಿಗೆ, “ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಅವನು, “ಗುರುದೇವಾ, ನಾನು ಬಾಲ್ಯದಿಂದಲೇ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಆತನಿಗೆ - ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲಕ್ಕೂ ಸರಿಯಾಗಿ ನಡಕೊಂಡು ಬಂದಿದ್ದೇನೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು, “ಬೋಧಕರೇ, ನಾನು ಇವೆಲ್ಲವನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ತ್ಯಾ ಮಾನ್ಸಾನ್ “ಗುರುಜಿ, ಮಿಯಾ ಬಾರಿಕ್ ಅಸ್ತಾನಾಚ್ಯಾನ್ ಹೆ ಸಗ್ಳೆ ಖಾಯ್ದೆ ಪಾಳುನ್ಗೆತ್ ಹಾಂವ್,” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:20
11 ತಿಳಿವುಗಳ ಹೋಲಿಕೆ  

ಆ ಜನರು ತಾವು ದೇವರ ಸೇವೆ ಮಾಡುತ್ತಿರುವುದಾಗಿ ನಟಿಸುತ್ತಲೇ ಇರುವರು. ಆದರೆ ಅವರು ನಿಜವಾಗಿಯೂ ದೇವರ ಸೇವೆ ಮಾಡುತ್ತಿಲ್ಲವೆಂಬುದನ್ನು ಅವರ ಜೀವಿತವೇ ತೋರ್ಪಡಿಸುತ್ತದೆ. ತಿಮೊಥೆಯನೇ, ಅಂತಹ ಜನರಿಂದ ದೂರವಾಗಿರು.


ಯೆಹೂದ್ಯ ಧರ್ಮದಲ್ಲಿ ಬಹಳ ಆಸಕ್ತಿಯುಳ್ಳವನಾಗಿದ್ದು ಕ್ರೈಸ್ತಸಭೆಯನ್ನು (ವಿಶ್ವಾಸಿಗಳನ್ನು) ಹಿಂಸಿಸಿದೆನು. ಮೋಶೆಯ ಧರ್ಮಶಾಸ್ತ್ರಕ್ಕೆ ಯಾವಾಗಲೂ ವಿಧೇಯನಾಗಿದ್ದುದರಿಂದ ಯಾರೂ ನನ್ನ ವಿಷಯದಲ್ಲಿ ತಪ್ಪನ್ನು ಕಂಡುಹಿಡಿಯಲಾಗಲಿಲ್ಲ.


ನಾನು ಧರ್ಮಶಾಸ್ತ್ರವನ್ನು ತಿಳಿದುಕೊಳ್ಳುವುದಕ್ಕಿಂತ ಮೊದಲು ಧರ್ಮಶಾಸ್ತ್ರವಿಲ್ಲದವನಾಗಿ ಜೀವಂತವಾಗಿದ್ದೆನು. ಆದರೆ ಧರ್ಮಶಾಸ್ತ್ರದ ಆಜ್ಞೆಯು ನನ್ನ ಬಳಿಗೆ ಬಂದಾಗ, ಪಾಪವು ಜೀವಿಸತೊಡಗಿತು.


ಆ ಯುವಕನು, “ನಾನು ಇವೆಲ್ಲವುಗಳಿಗೆ ವಿಧೇಯನಾಗಿದ್ದೇನೆ. ನಾನು ಬೇರೆ ಏನಾದರೂ ಮಾಡಬೇಕೇ?” ಎಂದು ಕೇಳಿದನು.


ಆದರೆ ಆ ಮನುಷ್ಯನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳಲು ಬಯಸಿ, ಯೇಸುವಿಗೆ, “ನಾನು ಪ್ರೀತಿಸಬೇಕಾದ ನೆರೆಯವರು ಯಾರು?” ಎಂದು ಕೇಳಿದನು.


ದೇವರಿಂದ ಕದ್ದುಕೊಳ್ಳುವದನ್ನು ನಿಲ್ಲಿಸಿರಿ. ಮನುಷ್ಯನು ದೇವರಿಂದ ಕದ್ದುಕೊಳ್ಳಬಾರದು. ಆದರೆ ನೀವು ನನ್ನಿಂದ ಕದ್ದುಕೊಂಡಿದ್ದೀರಿ. “ನಿನ್ನಿಂದ ಏನು ಕದ್ದುಕೊಂಡಿದ್ದೇವೆ” ಎಂದು ಕೇಳುತ್ತೀರಾ? “ನಿಮ್ಮ ದಶಮ ಭಾಗವನ್ನು ನೀವು ನನಗೆ ಅರ್ಪಿಸಬೇಕಿತ್ತು. ವಿಶೇಷ ಕಾಣಿಕೆಗಳನ್ನು ನೀವು ನನಗೆ ಕೊಡಬೇಕಾಗಿತ್ತು. ಆದರೆ ನೀವು ಹಾಗೆ ಮಾಡಲಿಲ್ಲ.


ದೇವರು ಹೇಳಿದ್ದೇನೆಂದರೆ, “ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆನು. ನೀನು ಕಲ್ಲುಗಳ ರಾಶಿಯಾಗಿ ಹೋಗುವಿ. ನಿನ್ನ ಸುತ್ತಲೂ ಇರುವ ಜನಾಂಗಗಳು ನಿನ್ನನ್ನು ಗೇಲಿ ಮಾಡುತ್ತವೆ. ನಿನ್ನನ್ನು ದಾಟಿಹೋಗುವ ಪ್ರತಿಯೊಬ್ಬನೂ ನಿನ್ನನ್ನು ಕಂಡು ಹಾಸ್ಯಮಾಡುವನು.


ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.


ಯೇಸು ಆ ಮನುಷ್ಯನನ್ನು ಪ್ರೀತಿಯಿಂದ ದೃಷ್ಟಿಸಿನೋಡಿ, “ನೀನು ಮಾಡಬೇಕಾದ ಕಾರ್ಯವೊಂದಿದೆ. ಹೋಗಿ, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ಇರುವುದು. ನಂತರ ಬಂದು, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು